ಗುರುವಾರ , ಅಕ್ಟೋಬರ್ 21, 2021
29 °C

ಅಧಿವೇಶನ ಮುಗಿದ ನಂತರ ಪ್ರವಾಸ ಮುಂದುವರಿಕೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಮೈಸೂರಿನಿಂದ ರಾಜ್ಯ ಪ್ರವಾಸ ಪ್ರಾರಂಭಿಸಿದ್ದೇನೆ. ಅಧಿವೇಶನ ಮುಗಿದ ನಂತರ ಪ್ರವಾಸ ಮುಂದುವರಿಸುವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಬೆಲೆ ಏರಿಕೆ ಕುರಿತು ಸದನದಲ್ಲಿ ಪ್ರತಿಪಕ್ಷಗಳು ಸುದೀರ್ಘ ಚರ್ಚೆ ನಡೆಸಿವೆ. ಪ್ರತಿ ಪಕ್ಷಗಳಿಗೆ ಮುಖ್ಯಮಂತ್ರಿ ಸದನದಲ್ಲೇ ಸೂಕ್ತ  ಉತ್ತರ ನೀಡಿದ್ದಾರೆ. ವಾಸ್ತವಿಕವಾಗಿ ಬೆಲೆ ಏರಿಕೆ ಏಕೆ ಅನಿವಾರ್ಯವಾಗಿತ್ತು ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಬೆಲೆ ನಿಯಂತ್ರಣಕ್ಕೆ ಬರಲಿದೆ. ಪೆಟ್ರೋಲ್, ಡೀಸೆಲ್ ದರ ಇಳಿಕೆ ಕುರಿತು ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದರು.

ದಾವಣಗೆರೆಯಲ್ಲಿ ನಡೆಯಲಿರುವ ಪಕ್ಷದ ಕೋರ್‌ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಕುರಿತು ಹೆಚ್ಚಿನ ಚರ್ಚೆ ನಡೆಯಲಿದೆ. ಪಕ್ಷ ಬಲಪಡಿಸಲು ನಾಯಕರು ನೀಡುವ ಸಲಹೆಗಳನ್ನು ಕಾರ್ಯರೂಪಕ್ಕೆ ತರುವ ಪ್ರಯತ್ನ ಮಾಡಲಾಗುವುದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು