ಬುಧವಾರ, ಜನವರಿ 20, 2021
17 °C

ನಾನಿನ್ನೂ ಜೆಡಿಎಸ್‌ನಲ್ಲೇ ಇದ್ದೇನೆ: ವೈ.ಎಸ್‌.ವಿ ದತ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಡೂರು: ‘ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದೇನೆ ಎಂಬ ವರದಿಗಳು ಸತ್ಯವಲ್ಲ. ನಾನಿನ್ನೂ ಜೆಡಿಎಸ್‌ ನಲ್ಲಿಯೇ ಇದ್ದೇನೆ. ಮುಂದೆಯೂ ಇರುತ್ತೇನೆ’ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ತಿಳಿಸಿದರು.

‘ಪ್ರಜಾವಾಣಿ’ಗೆ ದೂರವಾಣಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಜೆಡಿಎಸ್ ತೊರೆಯುವಂತಹ ಜರೂರತ್ತು ನನಗಿಲ್ಲ. ಸೋಮವಾರವೂ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಬರಲಿರುವ ಗ್ರಾಮ ಪಂಚಾಯಿತಿ ಚುನಾವಣೆಗಳ ಸಿದ್ಧತೆಗಾಗಿ ಕಡೂರಿನಲ್ಲಿ ಪೂರ್ವಭಾವಿ ಸಭೆಗಳನ್ನು ಮಾಡಬೇಕಿದೆ. ಸದ್ಯಕ್ಕೆ ಪಕ್ಷ ಸಂಘಟನೆಯೇ ಪ್ರಮುಖವಾಗಿದ್ದು, ಬೇರೆ ಪಕ್ಷ ಸೇರುವ ಆಲೋಚನೆ ಮಾಡಿಲ್ಲ. ನನ್ನ ತಲೆಯಲ್ಲಿ ಈ ಆಲೋಚನೆ ಬಂದಿಲ್ಲ. ಪಕ್ಷದ ಕಾರ್ಯಕರ್ತರು ಇದರ ಬಗ್ಗೆ ಹೆಚ್ಚಿನ ಗಮನ ಕೊಡದೆ, ಪಕ್ಷದ ಸಂಘಟನೆಗೆ ಒತ್ತು ನೀಡಬೇಕು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು