ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತತ ಮಳೆಗೆ ಹಂಪಿಯಲ್ಲಿ ಕುಸಿದು ಬಿದ್ದ ಮಂಟಪ

Last Updated 28 ಸೆಪ್ಟೆಂಬರ್ 2020, 9:53 IST
ಅಕ್ಷರ ಗಾತ್ರ

ಹೊಸಪೇಟೆ: ಸತತ ಸುರಿಯುತ್ತಿರುವ ಮಳೆಗೆ ತಾಲ್ಲೂಕಿನ ಹಂಪಿ ವಿಜಯ ವಿಠಲ ದೇವಸ್ಥಾನದ ಮಗ್ಗುಲಲ್ಲಿರುವ ಮಂಟಪ ಸೋಮವಾರ ಕುಸಿದು ಬಿದ್ದಿದೆ.

ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ನಿರ್ಮಿಸಿರುವ ಈ ಮಂಟಪ ಸಂಪೂರ್ಣ ಕಲ್ಲಿನಿಂದಲೇ ಕಟ್ಟಲಾಗಿದೆ. ಮಂಟಪದ ಆಧಾರ ಹಾಗೂ ಚಾವಣಿಗೂ ಕಲ್ಲುಗಳನ್ನೇ ಉಪಯೋಗಿಸಲಾಗಿದೆ. ‘ಈ ವರ್ಷ ಉತ್ತಮ ಮಳೆಯಾಗಿದೆ. ನಾಲ್ಕು ದಿನಗಳಿಂದ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ಮಳೆಗೆ ನೆನೆದು ಈ ಪುರಾತನ ಮಂಟಪ ಕುಸಿದು ಬಿದ್ದಿರಬಹುದು’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಹಂಪಿ ವೃತ್ತದ ಡೆಪ್ಯುಟಿ ಸೂಪರಿಟೆಂಡೆಂಟ್‌ ಪಿ. ಕಾಳಿಮುತ್ತು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT