ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯವಿವಾಹ ತಡೆಗೆ ಕಠಿಣ ಕ್ರಮ: ಹಾಲಪ್ಪ ಆಚಾರ್

ಸದನದಲ್ಲಿ ’ಪ್ರಜಾವಾಣಿ‘ ವರದಿ ಪ್ರಸ್ತಾಪ
Last Updated 14 ಸೆಪ್ಟೆಂಬರ್ 2021, 17:52 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಬಾಲ್ಯವಿವಾಹ ತಡೆಗೆ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಬಾಲ್ಯವಿವಾಹ ಗುರುತಿಸಲು ಹಾಗೂ ತಡೆಯಲು ಮತ್ತು ಮಕ್ಕಳ ರಕ್ಷಣೆಗೆ ಅಗತ್ಯವಿರುವ ಕಾರ್ಯಸೂಚಿಗಳನ್ನು (ಎಸ್‌ಒಪಿ) ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

ಕೋವಿಡ್ ಸಂದರ್ಭದಲ್ಲಿ ಬಾಲ್ಯವಿವಾಹಗಳ ಸಂಖ್ಯೆ ಹೆಚ್ಚಾಗಿದ್ದರ ಕುರಿತು ‘ಪ್ರಜಾವಾಣಿ‘ಯಲ್ಲಿ ಪ್ರಕಟವಾದ ವರದಿಯನ್ನು ಬಿಜೆಪಿಯ ಮಹಾಂತೇಶ್‌ ಕವಟಗಿಮಠ ಸದನದಲ್ಲಿ ಪ್ರಸ್ತಾಪಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ‘ಬಾಲ್ಯವಿವಾಹ ತಡೆ ಕುರಿತು ಕಿರುಚಿತ್ರಗಳನ್ನು ಸಿದ್ಧಪಡಿಸಿ, ಇವುಗಳನ್ನು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳ ಮೂಲಕ ಪ್ರಸಾರ ಮಾಡುವ ಬಗ್ಗೆ ಕ್ರಿಯಾಯೋಜನೆ ರೂಪಿಸಲಾಗುತ್ತಿದೆ’ ಎಂದೂ ಮಾಹಿತಿ ನೀಡಿದರು.

‘2020–21ನೇ ಸಾಲಿನಲ್ಲಿ 296 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿವೆ’ ಎಂದೂ ಅವರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT