ಬೆಂಗಳೂರು: ಕೋವಿಡ್ ಲಸಿಕೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಲಸಿಕೆಯನ್ನು ಅಕ್ರಮ ಮಾಡಿರುವುದು ಮತ್ತು ಸಾಗಾಟ ಮಾಡಿರುವುದು ಗಮನಕ್ಕೆ ಬಂದಿದೆ. ಈ ಅಪರಾಧದಲ್ಲಿ ಆಸ್ಪತ್ರೆಯ ವೈದ್ಯರೂ ಮತ್ತು ಸಿಬ್ಬಂದಿ ಶಾಮೀಲಾಗಿರುವುದೂ ಪತ್ತೆ ಆಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಅಕ್ರಮವಾಗಿ ಸಂಗ್ರಹಿಸಿಡುವುದು ಅಕ್ಷಮ್ಯ ಅಪರಾಧ. ಜನರ ಜೀವ ಉಳಿಸುವ ಲಸಿಕೆಯನ್ನು ಹಣದ ಆಸೆಗೆ ಅಕ್ರಮವಾಗಿ ಮಾರಾಟ ಮಾಡಿದರೆ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದೂ ಎಚ್ಚರಿಸಿದರು.

ರಾಜ್ಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಸರಬರಾಜು ಆಗಲಿದೆ. ಯಾವ ರೀತಿ ರೆಮ್‌ಡಿಸಿವಿರ್‌ಗೆ ಇದ್ದ ಬೇಡಿಕೆ ಕಡಿಮೆ ಆಯಿತೋ, ಅದೇ ರೀತಿ ಲಸಿಕೆಗೂ ಬೇಡಿಕೆ ಕಡಿಮೆ ಆಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಆರಂಭದಲ್ಲಿ ಕಾಳಸಂತೆಕೋರರು ರೆಮ್‌ಡಿಸಿವಿರ್ ಅಕ್ರಮವಾಗಿ ಸಂಗ್ರಹಿಸಿಟ್ಟು ಕೃತಕ ಅಭಾವ ಸೃಷ್ಟಿಸಿದರು. ಇದರಿಂದ ಸಾಕಷ್ಟು ಸಮಸ್ಯೆ ಉದ್ಭವಿಸಿತ್ತು. ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರಿಂದ ಪರಿಸ್ಥಿತಿ ಸುಧಾರಿಸಿದೆ ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಗಳು ಕೋವಿಡ್ ಲಸಿಕೆ ನೀಡುವ ಸಂಬಂಧ ಕೇಂದ್ರ ಸರ್ಕಾರ ಒಂದು ನಿಯಮವನ್ನು ರೂಪಿಸಬೇಕು. ಇಲ್ಲವಾದರೆ ಅನಗತ್ಯ ಗೊಂದಲ ಸೃಷ್ಟಿಯಾಗುತ್ತದೆ. ಹಾಸಿಗೆ ಸಮಸ್ಯೆ ಬಹುತೇಕ ಬಗೆಹರಿದಿದೆ. ವೆಂಟಿಲೇಟರ್ ಸಮಸ್ಯೆ ಇದೆ. ಆದಷ್ಟು ಬೇಗನೆ ಕೊರತೆ ನೀಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಗ್ರಾಮೀಣ ಪ್ರದೇಶದಲ್ಲಿ ಲಾಕ್‌ಡೌನ್ ಪರಿಣಾಮಕಾರಿಯಾಗಿದೆ. ಜನರು ನಿಯಮಗಳನ್ನು ಪಾಲಿಸುತ್ತಿದ್ದಾರೆ. ಆದರೆ, ಪಟ್ಟಣ ಪ್ರದೇಶದಲ್ಲಿ ಜನರು ಮಾರ್ಗಸೂಚಿ ಉಲ್ಲಂಘಿಸುತ್ತಿದ್ದಾರೆ. ಆದ್ದರಿಂದ, ಬಿಗಿಯಾದ ಕ್ರಮಗಳನ್ನು ತಗೆದುಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಅನಗತ್ಯವಾಗಿ ಓಡಾಡುವವರನ್ನು ಬಿಡುವುದಿಲ್ಲ. ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದರು.

ಪೊಲೀಸ್ ಕುಟುಂಬದವರಿಗೂ ಲಸಿಕೆ
ಬೆಂಗಳೂರು: ಪೊಲೀಸ್ ಇಲಾಖೆಯ ಶೇ 95 ರಷ್ಟು ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಎರಡನೇ ಹಂತವಾಗಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಲಸಿಕೆ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪೊಲೀಸ್ ಸಿಬ್ಬಂದಿ ಮಾತ್ರವಲ್ಲ ಅವರ ಕುಟುಂಬದವರೂ ಕೂಡ ಕೊರೊನಾ ಯೋಧರು ಎಂದು ಪರಿಗಣಿಸಿ ಎರಡನೇ ಹಂತದಲ್ಲಿ ಅವರಿಗೂ ಕೋವಿಡ್ ಲಸಿಕೆ ನೀಡಲಾಗುವುದು. ಈ ಸಂಬಂಧ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.