ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡಿದರೆ ಕಠಿಣ ಕ್ರಮ: ಕಮಲ್ ಪಂತ್

Last Updated 29 ಅಕ್ಟೋಬರ್ 2021, 12:21 IST
ಅಕ್ಷರ ಗಾತ್ರ

ಬೆಂಗಳೂರು: 'ನಟ ಪುನೀತ್ ರಾಜ್‌ಕುಮಾರ್ ಅವರ ಪಾರ್ಥಿವಶರೀರದ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಗಣ್ಯರಿಗೆ ಪ್ರತ್ಯೇಕ ದ್ವಾರದ ಮೂಲಕ ಪ್ರವೇಶ ನೀಡಲಾಗುತ್ತದೆ. ತಮ್ಮ ನೆಚ್ಚಿನ ನಟನ ಅಂತಿಮ‌ ದರ್ಶನ ಪಡೆಯಲು ಅಭಿಮಾನಿಗಳಿಗೂ ಅವಕಾಶ ನೀಡಲಾಗುತ್ತದೆ' ಎಂದು ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು.

'ಸಾರ್ವಜನಿಕ‌ ಆಸ್ತಿಪಾಸ್ತಿಗಳಿಗೆ ಹಾನಿ ಮಾಡುವ,ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ' ಎಂದು ಎಚ್ಚರಿಸಿದರು.

'ಮುಂಜಾಗ್ರತಾ ದೃಷ್ಟಿಯಿಂದ ಶುಕ್ರವಾರ ಮಧ್ಯಾಹ್ನದಿಂದ ಭಾನುವಾರ ಮಧ್ಯರಾತ್ರಿಯವರೆಗೆ ಮದ್ಯದಂಗಡಿಗಳನ್ನು ಬಂದ್ ಮಾಡಿಸಲಾಗುತ್ತಿದೆ. ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಇದಕ್ಕಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನೂ ನಿಯೋಜಿಸಲಾಗಿದೆ' ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT