ಮಂಗಳವಾರ, ಸೆಪ್ಟೆಂಬರ್ 21, 2021
28 °C

ಕೊರೊನಾ ಸೋಂಕು ಹೆಚ್ಚಾದರೆ ಮಾತ್ರ ಲಾಕ್‌ಡೌನ್‌ ಜಾರಿಗೆ ಕ್ರಮ: ಸಚಿವ ಆರ್‌.ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೋವಿಡ್‌ ನಿಯಂತ್ರಣಕ್ಕಾಗಿ ಲಾಕ್‌ಡೌನ್‌ ಜಾರಿಗೆ ತರುವ ಪರಿಸ್ಥಿತಿ ನಗರದಲ್ಲಿ ಸದ್ಯಕ್ಕೆ ಇಲ್ಲ. ಲಾಕ್‌ಡೌನ್‌ ಜಾರಿಯಾಗುತ್ತದೆ ಎಂದು ತಲೆಯಲ್ಲಿ ಇಟ್ಟುಕೊಳ್ಳುವುದು ಬೇಡ. ಕೋವಿಡ್‌ ಪ್ರಕರಣಗಳು ಎಷ್ಟು ಜಾಸ್ತಿ ಆಗುತ್ತವೆಯೋ ಅದರ ಆಧಾರದಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಕಂದಾಯ ಸಚಿವ ಆರ್‌.ಅಶೋಕ ಸ್ಪಷ್ಟಪಡಿಸಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ನಗರದಲ್ಲಿ 50 ದಿನಗಳಿಂದ ಕೋವಿಡ್‌ ಪ್ರಕರಣಗಳ ಸಂಖ್ಯೆ 300 ರಿಂದ 400 ನಡುವೆ ಇದೆ. ಇದು ಸಹಜ ಮಟ್ಟ. ಈ ಸಂಖ್ಯೆ ಏನಾದರೂ ಹೆಚ್ಚಾದರೆ ಕಠಿಣ ಕ್ರಮ ಕೈಗೊಳ್ಳುವತ್ತ ಸರ್ಕಾರ ಮುಂದಿನ ಹೆಜ್ಜೆ ಇಡುವುದು ಶೇ 100ರಷ್ಟು ನಿಶ್ಚಿತ. ಆಗ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸುವ ಕುರಿತು ಹಾಗೂ ರಾತ್ರಿ ಕರ್ಫ್ಯೂವನ್ನು ಇನ್ನಷ್ಟು ಬಿಗುಗೊಳಿಸುವ ಬಗ್ಗೆ ಯೋಚನೆ ಮಾಡುತ್ತೇವೆ. ಕೋವಿಡ್‌ ಹರಡುವುದನ್ನು ತಡೆಯಲು ಇಂತಹ ಕ್ರಮ ಕೈಗೊಳ್ಳುವುದು ಅನಿವಾರ್ಯ’ ಎಂದರು. 

ಹಬ್ಬಗಳ ಸಂದರ್ಭದಲ್ಲಿ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗುವುದನ್ನು ಹೇಗೆ ತಡೆಯುವಿರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅಶೋಕ, ‘ಶ್ರಾವಣ ಶನಿವಾರ ಬಂದಿದೆ. ಹಿಂದು, ಮುಸ್ಲಿಂ ಹಾಗೂ ಕ್ರೈಸ್ತರ ಹಬ್ಬಗಳೂ ಈ ತಿಂಗಳಿನಲ್ಲಿ ಬರುತ್ತಿವೆ. ಆ ದೃಷ್ಟಿಯಿಂದ ಏನೆಲ್ಲ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಮೂರು– ನಾಲ್ಕು ದಿನಗಳಲ್ಲಿ ಚರ್ಚಿಸಿ ನಿರ್ಧಾರಕ್ಕೆ ಬರುತ್ತೇನೆ. ಜನರ ಆರೋಗ್ಯ ನಮಗೆ ಮುಖ್ಯ. ಈ ದೃಷ್ಟಿಯಿಂದ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ’ ಎಂದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು