ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಜಾರಿಗೊಳಿಸಿ: ಯಡಿಯೂರಪ್ಪ

ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ
Last Updated 20 ಜನವರಿ 2021, 7:45 IST
ಅಕ್ಷರ ಗಾತ್ರ

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ-2020 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಅದಕ್ಕೆ ಪೂರಕವಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ‌ಬುಧವಾರ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಸಭೆ ನಡೆಸಿದ ಅವರು, ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿ ವಿಳಂಬ ಮಾಡಬಾರದು ಎಂದು ನಿರ್ದೇಶನ ನೀಡಿದರು.

ಕೋವಿಡ್ ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನಜೀವನ ಸುಧಾರಿಸುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೆ ಬಲ‌ ತುಂಬಲು ಉದ್ಯೋಗ ಖಾತ್ರಿ ಯೋಜನೆಯ‌ ಅನುಷ್ಠಾನ ಚುರುಕುಗೊಳಿಸಬೇಕು. ಬೇಸಿಗೆ ಸಮೀಪಿಸುತ್ತಿರುವುದರಿಂದ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಎಚ್ಚರಿಕೆ‌ ವಹಿಸಬೇಕು ಎಂದರು.

ಶಾಲೆಗಳು ಮುಚ್ಚಿದ್ದ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಬಾಲ್ಯ ವಿವಾಹಗಳು ನಡೆದಿವೆ ಎಂಬ ಮಾಹಿತಿ ಇದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ‌ಬಾಲ್ಯ ವಿವಾಹ ನಡೆಯದಂತೆ ನಿಯಂತ್ರಣ ಮಾಡಬೇಕು ಎಂದು ನಿರ್ದೇಶನ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ14,000 ಪ್ರಕರಣಗಳು ಜಿಲ್ಲಾಧಿಕಾರಿಗಳ ಬಳಿ ಬಾಕಿ ಇವೆ. ಅವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಕೋರಿದ್ದಾರೆ. ಈ ಎಲ್ಲ ಪ್ರಕರಣಗಳ ತ್ವರಿತ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಯಡಿಯೂರಪ್ಪ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT