ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೀಟು ರದ್ಧತಿ ದಂಡ ಮೊತ್ತ ಹೆಚ್ಚಳ; ಪ್ರತಿಭಟನೆ

Last Updated 29 ಡಿಸೆಂಬರ್ 2020, 21:07 IST
ಅಕ್ಷರ ಗಾತ್ರ

ಬೆಂಗಳೂರು: ‘ವೃತ್ತಿಪರ ಕಾಲೇಜು ಸೀಟು ರದ್ಧತಿ ಶುಲ್ಕವನ್ನು ಹೆಚ್ಚಳ ಮಾಡಲಾಗಿದ್ದು, ಇದರಿಂದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ಆರ್ಥಿಕ ಹೊರೆಯಾಗಿದೆ’ ಎಂದು ಆರೋಪಿಸಿ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿ ಎದುರು ಎಸ್‌ಎಫ್‌ಐ, ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.

‘ಕೆಲ ದಿನಗಳಿಂದ ರಾಜ್ಯದಾದ್ಯಂತ ವೃತ್ತಿಪರ ವಿದ್ಯಾರ್ಥಿಗಳ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯುತ್ತಿದ್ದು, ಅದರಲ್ಲಿ ಸಾಕಷ್ಟು ಸಮಸ್ಯೆಗಳು ಉದ್ಭವಿಸುತ್ತಿವೆ. ವಿದ್ಯಾರ್ಥಿಗಳು, ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಿ ವೃತ್ತಿಪರ ಕಾಲೇಜುಗಳಲ್ಲಿ ಸೀಟು ಪಡೆದುಕೊಂಡಿದ್ದಾರೆ. ಆದರೆ, ಅವರು ಕಾರಣಾಂತರಗಳಿಂದಾಗಿ ಸೀಟು ರದ್ಧತಿ ಮಾಡಿದರೆ ಕಾಲೇಜಿನ ಶುಲ್ಕದ 5 ಪಟ್ಟು ಹೆಚ್ಚಿನ ಮೊತ್ತವನ್ನು ದಂಡವಾಗಿ ಪಾವತಿಸಬೇಕೆಂದು ನಿಯಮ ರೂಪಿಸಲಾಗಿದೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.

‘ಕೊರೊನಾ ಲಾಕ್‌ಡೌನ್‌ನಿಂದಾಗಿ ಎಲ್ಲರೂ ಸಂಕಷ್ಟದಲ್ಲಿದ್ದಾರೆ. ಇಂಥ ಸ್ಥಿತಿಯಲ್ಲೇ ಸೀಟು ರದ್ಧತಿ ಶುಲ್ಕ ಹೆಚ್ಚಳ ಮಾಡಿರುವುದು ಖಂಡನೀಯ. ಶುಲ್ಕ ಹೆಚ್ಚಳವನ್ನು ಕೂಡಲೇ ಹಿಂಪಡೆಯಬೇಕು’ ಎಂದು ಅವರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT