ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದು, ಆ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಮಾರತ್ತಳ್ಳಿಯ ಕಾಲೇಜೊಂದರ ವಿದ್ಯಾರ್ಥಿಗಳು ಗುರುವಾರ ಈ ಘೋಷಣೆ ಕೂಗಿದ್ದಾರೆ.
ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆ ವೇಳೆ ಘೋಷಣೆ ಕೂಗಲಾಗಿದೆ. ತಮಾಷೆಗಾಗಿ ಈ ರೀತಿ ಮಾಡಿರುವುದಾಗಿ ವಿದ್ಯಾರ್ಥಿಗಳಾದ ರಿಯಾ, ಆರ್ಯನ್, ದಿನಕರ್ ಹೇಳಿಕೊಂಡಿದ್ದಾರೆ. ವಿಡಿಯೊ ಗಮನಕ್ಕೆ ಬಂದಿದೆ. ದೂರು ದಾಖಲು ಮಾಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.