ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ ಪೀಡಿತ ಪ್ರದೇಶಗಳ ಅಧ್ಯಯನ: ಸೆ. 7 ರಂದು ರಾಜ್ಯಕ್ಕೆ ಕೇಂದ್ರದ ತಂಡ

Last Updated 3 ಸೆಪ್ಟೆಂಬರ್ 2020, 9:14 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದ ಆಗಿರುವ ನಷ್ಟದ ಅಧ್ಯಯನ ನಡೆಸಲು ಇದೇ 7 ರಂದು ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡ ರಾಜ್ಯಕ್ಕೆ ಬರಲಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು.

‘ಕೇಂದ್ರದ ಹಿರಿಯ ಅಧಿಕಾರಿ ಕೆ.ವಿ.ಪ್ರತಾಪ್‌ ಅವರ ನೇತೃತ್ವದಲ್ಲಿ ಆರು ಮಂದಿ ಅಧಿಕಾರಿಗಳನ್ನು ಒಳಗೊಂಡ ತಂಡ ಬರಲಿದ್ದು, ಸೆ. 7 ರಂದು ಮುಖ್ಯಮಂತ್ರಿಯರ ಜತೆ ಚರ್ಚೆ ನಡೆಸಲಿದೆ. ಸೆ. 8 ರಂದು ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಲಿದೆ. ಸೆ.9 ರಂದು ಕೇಂದ್ರದ ತಂಡದ ಜತೆಗೆ ನಾವು ಚರ್ಚೆ ನಡೆಸಿ, ರಾಜ್ಯದ ಪರವಾಗಿ ₹4,800 ಕೋಟಿ ಬಿಡುಗಡೆಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ’ ಎಂದರು.

‘ಮುಖ್ಯಮಂತ್ರಿಯವರ ಜತೆಗೆ ಪ್ರವಾಹ ಪೀಡಿತ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಲಾಗಿತ್ತು. ಕೇಂದ್ರದ ಅಧಿಕಾರಿಗಳವನ್ನು ಕಳುಹಿಸುವಂತೆ ಮನವಿ ಮಾಡಲಾಗಿತ್ತು. ಆ ಪ್ರಕಾರ ಕೇಂದ್ರ ಸರ್ಕಾರವು ನಮ್ಮ ಮನವಿಗೆ ಸ್ಪಂದಿಸಿದೆ. ಕೊಡಗು, ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ಭೇಟಿ ನೀಡಲಿದೆ’ ಎಂದು ಅಶೋಕ ಹೇಳಿದರು.

‘ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿ ₹395 ಕೋಟಿ ಹಣವನ್ನು ಬಿಡುಗಡೆ ಮಾಡಿದೆ. ಅಲ್ಲದೆ, ಎನ್‌ಡಿಎಆರ್‌ಎಫ್‌ನ 9 ತಂಡಗಳಿಗೆ ಬೇಡಿಕೆ ಸಲ್ಲಿಸಿದ್ದೆವು. ಆ ಪ್ರಕಾರ, ತಂಡಗಳನ್ನು ಕಳುಹಿಸಿದ್ದು, ಅವುಗಳನ್ನು ಪ್ರವಾಹ ಪೀಡಿತ ವಿವಿಧ ಜಿಲ್ಲೆಗಳಲ್ಲಿ ನಿಯೋಜನೆ ಮಾಡಲಾಗಿದೆ’ ಎಂದು ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT