ಶುಕ್ರವಾರ, ಅಕ್ಟೋಬರ್ 22, 2021
21 °C

ಎಸ್‌ಐ, ಕಾನ್‌ಸ್ಟೆಬಲ್‌ ನೇಮಕಾತಿ: ಆಮಿಷಗಳಿಗೆ ಬಲಿ ಆಗಬೇಡಿ- ಆರಗ ಜ್ಞಾನೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಕಾನ್‌ಸ್ಟೆಬಲ್‌ ಮತ್ತು ಸಬ್ ಇನ್‌ಸ್ಪೆಕ್ಟರ್‌ಗಳ ನೇಮಕಾತಿಯನ್ನು ಪಾರದರ್ಶಕವಾಗಿ ಮತ್ತು ನಿಯಮಗಳ ಅನುಸಾರ ನಡೆಸಲಾಗುತ್ತಿದೆ. ಹೀಗಾಗಿ, ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

‘ಕೆಲಸ ಕೊಡಿಸುತ್ತೇನೆಂದು ಕೆಲವರು ಭರವಸೆ ನೀಡಿ ಅಭ್ಯರ್ಥಿಗಳನ್ನು ವಂಚಿಸುತ್ತಿರುವ  ಘಟನೆಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಆಮಿಷಗಳಿಗೆ ಬಲಿ ಆಗಬಾರದು’ ಎಂದೂ ಅವರು ಹೇಳಿದ್ದಾರೆ.

‘ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ 947 ಸಬ್ ಇನ್‌ಸ್ಪೆಕ್ಟರ್‌ಗಳು ಹಾಗೂ 4000 ಕಾನ್‌ಸ್ಟೆಬಲ್‌ ಹುದ್ದೆಗಳ ನೇಮಕಾತಿ ನಡೆಯುತ್ತಿವೆ. ನೇಮಕಾತಿ ಪ್ರಕ್ರಿಯೆಗಳ ಭಾಗವಾಗಿ ನಡೆಯುತ್ತಿರುವ ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆಗಳು, ಅತ್ಯಂತ ಪಾರದರ್ಶಕವಾಗಿ ನಡೆಯಲಿದೆ. ಇದರಲ್ಲಿ ದಾಖಲಾಗುವ ಅಂಕಗಳೇ ಅಭ್ಯರ್ಥಿಗಳ ಆಯ್ಕೆಗೆ ಮಾನದಂಡ ಆಗಲಿದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ಹುದ್ದೆ ಕೊಡಿಸುವುದಾಗಿ ಯಾರಾದರೂ ಆಮಿಷ ಒಡ್ಡಿದರೆ, ಅಭ್ಯರ್ಥಿಗಳು ಅಥವಾ ಅವರ ಪೋಷಕರು ನೇರವಾಗಿ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದೂ ಸಚಿವರು ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು