ಭಾನುವಾರ, ಮೇ 29, 2022
22 °C

ಸಬ್‌ಇನ್‌ಸ್ಪೆಕ್ಟರ್ ಆಯ್ಕೆ ಅಕ್ರಮ: ಅನ್ಯಾಯವಾಗಿದ್ದರೆ ಮೇಲ್ಮನವಿ ಸಲ್ಲಿಸಿ- ಆರಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ‘ಸಬ್‌ ಇನ್‌ಸ್ಪೆಕ್ಟರ್ ಹುದ್ದೆ ಆಯ್ಕೆಯಲ್ಲಿ ಅಕ್ರಮ ನಡೆದಿದೆ ಎಂಬ ಸಂಶಯವಿದ್ದರೆ ಅಂತಹ ಅಭ್ಯರ್ಥಿಗಳು ಉತ್ತರ ಪತ್ರಿಕೆಯ ನಕಲು ಪಡೆದು ಮೇಲ್ಮನವಿ ಸಲ್ಲಿಸಬಹುದು’ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ಪೊಲೀಸ್‌ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಪಿಎಸ್‌ಐ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ನಿರಾಧಾರ. ಕಲಬುರಗಿಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದ ಅಭ್ಯರ್ಥಿಗಳನ್ನು ಜೈಲಿಗೆ ಕಳುಹಿಸಲಾಗಿದೆ. ಒಂದು ಲಕ್ಷ ಅಭ್ಯರ್ಥಿಗಳು ಪಿಎಸ್ಐ ಪರೀಕ್ಷೆ ಬರೆದಿದ್ದರು. ಆಯ್ಕೆಯಾಗಿದ್ದು 450. ಉಳಿದವರಿಗೆ ಅಸಹನೆ ಸಹಜ. ಆದರೂ ಅನ್ಯಾಯವಾಗಿದ್ದರೆ ವಿಚಾರಣೆ ನಡೆಸಲಾಗುವುದು’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು