ಗುರುವಾರ , ಡಿಸೆಂಬರ್ 8, 2022
18 °C
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬ್ಯಾನರ್ ಅಳವಡಿಕೆ

ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಠಿ– ಹಿಂದೂವೇತರ ವರ್ತಕರಿಗೆ ನಿಷೇಧ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುಬ್ರಹ್ಮಣ್ಯ: ಪ್ರಸಿದ್ದ ಯಾತ್ರಾ ಸ್ಥಳವಾದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಸಂದರ್ಭದಲ್ಲಿ ಹಿಂದೂವೇತರ ವರ್ತಕರು ವ್ಯಾಪಾರ ವಹಿವಾಟು ನಡೆಸುವುದನ್ನು ನಿಷೇಧಿಸಿ ಅಳವಡಿಸಲಾದ ಬ್ಯಾನರ್ ಕಾಣಿಸಿಕೊಂಡಿದೆ.

ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ಬ್ಯಾನರ್ ಅಳವಡಿಸಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರಾ ಸಂದರ್ಭದಲ್ಲಿ ಹಿಂದುವೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸುಬ್ರಹ್ಮಣ್ಯ ಠಾಣೆಗೆ ಹಿಂದೂ ಜಾಗರಣೆ ವೇದಿಕೆಯ ಸುಬ್ರಹ್ಮಣ್ಯ ಘಟಕದ ವತಿಯಿಂದ ದೂರು ನೀಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಮುಜರಾಯಿ ಇಲಾಖೆಗೆ ಸೇರಿದೆ. ಇಲ್ಲಿ ಇದೇ 29ರಂದು ಚಂಪಾ ಷಷ್ಠಿ ಹಾಗೂ ಬ್ರಹ್ಮರಥೋತ್ಸವ ನಡೆಯಲಿದೆ. ಈ ದೇವಸ್ಥಾನದ ಜಾತ್ರೆಗಳಲ್ಲಿ ಹಿಂದೂವೇತರ ಧರ್ಮಗಳ ವರ್ತಕರೂ ವ್ಯಾಪಾರ ನಡೆಸುತ್ತಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು