ಬುಧವಾರ, ಅಕ್ಟೋಬರ್ 21, 2020
23 °C

ಇನ್ಫೊಸಿಸ್‌ ಪ್ರತಿಷ್ಠಾನ; 2021ರ ಅಂತ್ಯಕ್ಕೆ ನಿವೃತ್ತಿಗೆ ಸುಧಾಮೂರ್ತಿ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇನ್ಫೊಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು 2021 ರ ಡಿಸೆಂಬರ್‌ 31 ರಂದು ತಮ್ಮ ಹುದ್ದೆಯಿಂದ ನಿವೃತ್ತರಾಗಲು ನಿರ್ಧರಿಸಿದ್ದಾರೆ.

ಸುಮಾರು 25 ವರ್ಷಗಳಿಂದ ಇನ್ಫೊಸಿಸ್‌ ಪ್ರತಿಷ್ಠಾನದ ಮೂಲಕ ವಿವಿಧ ಸೇವಾ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. 2021 ಡಿಸೆಂಬರ್ 31ಕ್ಕೆ 25 ವರ್ಷಗಳು ಪೂರ್ಣಗೊಳ್ಳುವುದರಿಂದ ಅವರು ನಿವೃತ್ತಿ ಬಯಸಿದ್ದಾರೆ.

ಈ ಪ್ರತಿಷ್ಠಾನ 1996 ರಲ್ಲಿ ಸ್ಥಾಪನೆಯಾಗಿದೆ. ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಕಲೆ– ಸಂಸ್ಕೃತಿ, ಮಧ್ಯಾಹ್ನದ ಬಿಸಿಯೂಟ ಮತ್ತು ಕುಡಿಯುವ ನೀರಿನ ಯೋಜನೆಗಳಲ್ಲಿ ಪ್ರತಿಷ್ಠಾನ ಕಾರ್ಯ ನಿರ್ವಹಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸುಧಾಮೂರ್ತಿ, ‘ಕಳೆದ 25 ವರ್ಷಗಳಲ್ಲಿ ಸೇವಾ ಕಾರ್ಯದ ಮೂಲಕ ದೇಶದ
ನೈಜ ಸ್ಥಿತಿ ಮತ್ತು ಜನಸಾಮಾನ್ಯರ ಅಗತ್ಯವನ್ನು ಅರಿತುಕೊಳ್ಳಲು ಸಾಧ್ಯವಾಯಿತು. ಈ ಕಾರ್ಯವನ್ನು ಒಂದು ತಂಡವಾಗಿ ನಿರ್ವಹಿಸಿದೆವು. ಪ್ರತಿಷ್ಠಾನದಿಂದ ನಿವೃತ್ತಿ ಹೊಂದಿದ ಬಳಿಕವೂ ಇಂತಹ ಸೇವಾ ಕಾರ್ಯಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿಸಿಕೊಳ್ಳುತ್ತೇನೆ’ ಎಂದು ತಿಳಿಸಿದ್ದಾರೆ.

‘ಸುಧಾಮೂರ್ತಿ ಅವರ ಕಾರ್ಯವು ಭವಿಷ್ಯದ ಪೀಳಿಗೆಗೆ ಪ್ರೇರಣೆ ಆಗಲಿದೆ’ ಎಂದು ಇನ್ಫೊಸಿಸ್‌ ಸಿಎಸ್‌ಆರ್‌ ಸಮಿತಿಯ ಅಧ್ಯಕ್ಷೆ ಕಿರಣ್‌ ಮಜುಂದಾರ್‌ ಶಾ ಹೇಳಿದ್ದಾರೆ.

ಮೈಸೂರು ವಿ.ವಿಯಿಂದ ಗೌರವ ಡಾಕ್ಟರೇಟ್

ಮೈಸೂರು: ಇನ್ಫೊಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದೆ.

ಅ.19 ರಂದು ನಡೆಯಲಿರುವ ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು