ಬೆಂಗಳೂರು: ರಾಜ್ಯದಲ್ಲಿ 2015 ರಿಂದ 2021 ರ ಜನವರಿವರೆಗೆ ಕಬ್ಬು ಬೆಳೆಗಾರರಿಗೆ ಬಾಕಿ ಉಳಿಸಿಕೊಂಡಿರುವ ಮೊತ್ತ ₹3,878 ಕೋಟಿ ಎಂದು ಸಕ್ಕರೆ ಸಚಿವ ಎಂ.ಟಿ.ಬಿ ನಾಗರಾಜ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಅವಧಿಯಲ್ಲಿ ಒಟ್ಟು ₹77,890 ಕೋಟಿ ಪಾವತಿಸಬೇಕಾಗಿತ್ತು, ಈಗಾಗಲೇ ₹76,518 ಕೋಟಿ ರೈತರಿಗೆ ಪಾವತಿ ಮಾಡಲಾಗಿದೆ ಎಂದು ಅವರು ಹೇಳಿದರು.

2018–19 ನೇ ಹಂಗಾಮಿಗೆ ₹ 11,948 ಕೋಟಿ ಕಬ್ಬು ಬೆಳೆಗಾರರಿಗೆ ಪಾವತಿಸಬೇಕಾಗಿತ್ತು. ಈ ಪೈಕಿ ₹12,083 ಕೋಟಿಗಳನ್ನು ಪಾವತಿಸಲಾಗಿದೆ. ₹8.93 ಕೋಟಿ ಬಾಕಿ ಇದೆ. ಕೆಲವು ಕಾರ್ಖಾನೆಗಳು ನ್ಯಾಯ ಮತ್ತು ಲಾಭದಾಯಕ ಬೆಲೆಗಿಂತ ಹಚ್ಚಾಗಿ ಕಬ್ಬು ಬಿಲ್ಲನ್ನು ಪಾವತಿಸಿವೆ ಎಂದು ಹೇಳಿದರು.

2019–20 ನೇ ಹಂಗಾಮಿನಲ್ಲಿ ₹10,428.96 ಕೋಟಿಗಳನ್ನು ಕಬ್ಬು ಬೆಳೆಗಾರರಿಗೆ ಪಾವತಿಸಬೇಕಿದ್ದು, ಈ ಪೈಕಿ ₹10,628.73 ಪಾವತಿಸಲಾಗಿದೆ. ₹49.01 ಕೋಟಿ ಪಾವತಿಸಲು ಬಾಕಿ ಇದೆ ಎಂದು ನಾಗರಾಜ್ ಹೇಳಿದರು.

ಉಳಿದಿರುವ ಮೊತ್ತದ ಪಾವತಿಗೆ ಕ್ರಮ ಜರುಗಿಸಲಾಗಿದೆ. ಕಬ್ಬು ಸರಬರಾಜು ಮಾಡಿದ 14 ದಿನಗಳ ಒಳಗೆ ಬಿಲ್ ಪಾವತಿ ಮಾಡಬೇಕು. ಒಂದು ವೇಳೆ ಬಿಲ್ ಬಾಕಿ ಉಳಿಸಿಕೊಂಡರೆ, ಕಾರ್ಖಾನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಗೃಹಲಕ್ಷ್ಮಿ ಮುಂದುವರಿಕೆ ಇಲ್ಲ
ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಒಂದು ವರ್ಷದ ಅವಧಿಗೆಂದು ಜಾರಿ ಮಾಡಿದ್ದ ಗೃಹ ಲಕ್ಷ್ಮಿ ಯೋಜನೆಯನ್ನು ಮುಂದುವರಿಸದಿರಲು ಸರ್ಕಾರ ತೀರ್ಮಾನಿಸಿದೆ.

ಈ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆಭರಣಗಳ ಮೇಲೆ ಶೇ 3 ರಷ್ಟು ಬಡ್ಡಿದರದಲ್ಲಿ ಬೆಳೆ ಸಾಲ ನೀಡಲಾಗುತ್ತದೆ. ಜೆಡಿಎಸ್‌ನ ಬಂಡೆಪ್ಪ ಕಾಶೆಂಪೂರ ಅವರು ಪ್ರಶ್ನೋತ್ತರ ಅವಧಿಯಲ್ಲಿ ಈ ಯೋಜನೆಯನ್ನು ಕೈಬಿಟ್ಟಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರ ನೀಡಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಈ ಯೋಜನೆ ಒಂದು ವರ್ಷಕ್ಕೆ ಸೀಮಿತವಾಗಿತ್ತು. ಅಲ್ಲದೆ ಈ ಯೋಜನೆಯಡಿ ರಾಜ್ಯದಲ್ಲಿ ಸಾಲ ಪಡೆದವರ ಸಂಖ್ಯೆ 1015. ಎಲ್ಲೂ ಈ ಯೋಜನೆಗೆ ಬೇಡಿಕೆ ಇಲ್ಲ. 2–3 ಡಿಸಿಸಿ ಬ್ಯಾಂಕ್‌ಗಳನ್ನು ಬಿಟ್ಟರೆ ಬೇರೆ ಎಲ್ಲೂ ಕೇಳುತ್ತಿಲ್ಲ. ಆದ ಕಾರಣ ಈ ಯೋಜನೆ ಕೈಬಿಡಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.