ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸೌಧದಲ್ಲಿ ಕಬ್ಬಿನ ದರ ನಿಗದಿ ಸಭೆ: ಗದ್ದಲದಲ್ಲೇ ಅಂತ್ಯ

Last Updated 15 ಅಕ್ಟೋಬರ್ 2022, 11:01 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಪ್ರಸಕ್ತ ಹಂಗಾಮಿನ ಕಬ್ಬಿನ ದರ ನಿಗದಿಯನ್ನು ಅಂತಿಮಗೊಳಿಸಲಾಗುವುದು ಎಂದು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು.

ಕಬ್ಬುನ ದರ ನಿಗದಿಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಶನಿವಾರ ಮೂರು ಗಂಟೆಗಳಿಗೂ ಹೆಚ್ಚು ಕಾಲ ಸಭೆ ನಡೆಸಿದ ಅವರು, ರೈತ ಮುಖಂಡರು ಮತ್ತು ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳ ಅಭಿಪ್ರಾಯ ಆಲಿಸಿದರು. ಬಳಿಕ ಮಾತಮಾಡಿದ ಅವರು, 'ಶನಿವಾರದ ಸಭೆಯ ವಿವರಗಳನ್ನು ಮುಖ್ಯಮಂತ್ರಿಯವರಿಗೆ ನೀಡಲಾಗುವುದು. ಅವರ ನೇತೃತ್ವದಲ್ಲಿ ಸಭೆ ನಡೆಸಿ ದರ ನಿಗದಿಪಡಿಸಲಾಗುವುದು' ಎಂದರು.

ಪ್ರತಿ ಟನ್ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು. ಕಟಾವು ಮತ್ತು ಸಾಗಣೆ ವೆಚ್ಚವನ್ನು ರೈತರಿಗೆ ಹೊರೆಯಾಗದಂತೆ ನಿದಿ ಮಾಡಬೇಕು. ಕಾರ್ಖಾನೆಗಳು ತೂಕದಲ್ಲಿ ಮಾಡುವ ಮೋಸವನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ರೈತ ನಾಯಕಿ ಸುನಂದಾ ಜಯರಾಂ ಸೇರಿದಂತೆ ಹಲವು ರೈತ ಮುಖಂಡರು ಆಗ್ರಹಿಸಿದರು.

ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆ ಮಾಲೀಕರ ಸಂಘದ ಪ್ರತಿನಿಧಿ ಜಗದೀಶ ಗುಡುಗುಂಟಿ ಮಾತನಾಡಿ, 'ಕಾರ್ಖಾನೆಗಳಲ್ಲಿ ಉತ್ಪಾದನಾ ವೆಚ್ಚ ಹೆಚ್ಚಿದೆ. ಪ್ರತಿ ಟನ್ ಕಬ್ಬಿಗೆ ₹ 3,500ಕ್ಕಿಂತ ಹೆಚ್ಚು ದರ ನೀಡುವುದು ಅಸಾಧ್ಯ' ಎಂದರು.

ಸಕ್ಕರೆ ಕಾರ್ಖಾನೆಯಮಾಲೀಕರ ಪ್ರತಿನಿಧಿ ಹೇಳಿಕೆಗೆ ರೈತ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.

ಸಭೆ ಮುಕ್ತಾಯಗೊಳಿಸಿದ ಸಚಿವರು, ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ದರ ನಿಗದಿ ನಿರ್ಧಾರ ಕೈಗೊಳ್ಳುವುದಾಗಿ ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT