ಶನಿವಾರ, ನವೆಂಬರ್ 28, 2020
18 °C

ಪಂಚಾಯಿತಿ ಚುನಾವಣೆ ಮುಂದೂಡಿಕೆಗೆ ಎಂ.ಕೆ ಸುದರ್ಶನ ನೇತೃತ್ವದ ತಜ್ಞರ ಸಮಿತಿ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ ಕಾರಣದಿಂದಾಗಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡುವುದು ಸೂಕ್ತ ಎಂದು ಡಾ.ಎಂ.ಕೆ.ಸುದರ್ಶನ ನೇತೃತ್ವದ ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ.

ಈ ವರದಿಯಲ್ಲಿರುವ ಸಲಹೆಯನ್ನು ಮುಂದಿಟ್ಟುಕೊಂಡು ನ್ಯಾಯಾಲಯ ಮತ್ತು ಚುನಾವಣಾ ಆಯೋಗದ ಮನವೊಲಿಸಿ ಚುನಾವಣೆಯನ್ನು ಮುಂದೂಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಈಗ ಕೋವಿಡ್‌ ಸ್ವಲ್ಪ ಮಟ್ಟಿಗೆ ತಗ್ಗಿದ್ದರೂ ಜನ ಮತ್ತೆ ಒಟ್ಟಿಗೆ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಚುನಾವಣೆ ನಡೆಸುವುದು ಅಪಾಯಕಾರಿ. ಕೆಲವು ತಿಂಗಳುಗಳ ಮಟ್ಟಿಗೆ ಮುಂದೂಡುವುದು ಸೂಕ್ತ ಎಂಬ ಸಲಹೆಯನ್ನೂ ನೀಡಿದೆ .

‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮನೆ ಮನೆಗೆ ಹೋಗಿ ಮತವನ್ನು ಯಾಚಿಸುತ್ತಾರೆ. ಹೀಗೆ ಹೋಗುವಾಗ ಗುಂಪು ಗುಂಪಾಗಿಯೇ ಹೋಗುತ್ತಾರೆ. ಅಲ್ಲಿ ಭೌತಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್‌ ಧರಿಸುವಂತಹ ಸುರಕ್ಷತಾ ಕ್ರಮ ಅನುಸರಿಸುವ ಸಾಧ್ಯತೆ ತೀರಾ ಕಡಿಮೆ. ಇದರಿಂದ ಕೊರೊನಾ ವೈರಾಣು ಮನೆ ಮನೆಗೆ ತಲುಪಿದಂತಾಗುತ್ತದೆ’ ಎಂಬ ಆತಂಕವನ್ನು ಸಮಿತಿ ವ್ಯಕ್ತಪಡಿಸಿದೆ. ಒಟ್ಟು 6,021 ಗ್ರಾಮಪಂಚಾಯಿತಿಗಳಿಗೆ ಚುನಾವಣೆ ನಡೆಯುವುದರಿಂದ ಲಕ್ಷಾಂತರ ಜನ ಈ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು