ಬುಧವಾರ, ಅಕ್ಟೋಬರ್ 28, 2020
17 °C

ಅ.20ರಿಂದ ಸುಳ್ವಾಡಿ ಮಾರಮ್ಮನ ದೇಗುಲದಲ್ಲಿ ಪೂಜೆ–ಪುನಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: 2018ರ ಡಿ.14ರಂದು ನಡೆದಿದ್ದ ವಿಷ ಪ್ರಸಾದ ದುರಂತದ ಬಳಿಕ ಮುಚ್ಚಲಾಗಿದ್ದ ಹನೂರು ತಾಲ್ಲೂಕಿನ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದಲ್ಲಿ ಅ.20ರಿಂದ ಪೂಜೆ ಆರಂಭವಾಗಲಿದೆ.

ಹನೂರು ಶಾಸಕ ಆರ್.ನರೇಂದ್ರ ವಿಧಾನಸಭೆಯಲ್ಲಿ ಕೇಳಿದ ಪ್ರಶ್ನೆಗೆ ಲಿಖಿತವಾಗಿ ಉತ್ತರಿಸಿರುವ ಮುಜರಾಯಿ ಸಚಿವ
ಕೋಟ ಶ್ರೀನಿವಾಸ ಪೂಜಾರಿ, 'ಆಗಮ ಪಂಡಿತರ ಸಲಹೆ ಮೇರೆಗೆ ಅ.20ರಂದು ದೇಗುಲವನ್ನು ತೆರೆಯಲು ದಿನಾಂಕ ನಿಶ್ಚಯವಾಗಿದೆ. ವಿಧಿ-ವಿಧಾನಗಳೊಂದಿಗೆ ಪ್ರಾಯಶ್ಚಿತ್ತ ಪೂಜೆ, ಹೋಮ, ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದ ಬಳಿಕ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು' ಎಂದು ಹೇಳಿದ್ದಾರೆ.

2018ರ ಡಿ.14ರಂದು ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇಗುಲದ ಗೋಪುರ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಂದರ್ಭದಲ್ಲಿ ವಿಷಮಿಶ್ರಿತ ಪ್ರಸಾದ ವಿತರಿಸಿದ್ದರಿಂದ 17 ಮಂದಿ ಮೃತಪಟ್ಟು, 110ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು.

ಮಹದೇಶ್ವರ ಬೆಟ್ಟದ ಸಾಲೂರು ಮಠದ ಕಿರಿಯ ಸ್ವಾಮೀಜಿ ಇಮ್ಮಡಿ ಮಹದೇವಸ್ವಾಮಿ ಹಾಗೂ ಇತರ ಮೂವರು ದೇವಾಲಯದ ಆದಾಯದ ಮೇಲಿನ ನಿಯಂತ್ರಣಕ್ಕಾಗಿ ಈ ಕೃತ್ಯ ಎಸಗಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿತ್ತು. ನಾಲ್ವರು ಆರೋಪಿಗಳೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು