ಶನಿವಾರ, ಏಪ್ರಿಲ್ 1, 2023
23 °C

ಬೇಬಿಬೆಟ್ಟ, ಕೆಆರ್‌ಎಸ್‌ಗೆ ಭೇಟಿ ನೀಡಲಿರುವ ಸುಮಲತಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಸಂಸದೆ ಸುಮಲತಾ ಜುಲೈ 13 ಹಾಗೂ ಜುಲೈ 14 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು ಕಲ್ಲು ಗಣಿಗಾರಿಕೆ ಪ್ರದೇಶ ಬೇಬಿಬೆಟ್ಟ ಹಾಗೂ ಕೆಆರ್‌ಎಸ್‌ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ. 13ರಂದು ಜಿಲ್ಲಾ ಹಾಲು ಒಕ್ಕೂಟಕ್ಕೆ ಭೇಟಿ ನೀಡಲಿದ್ದು, ಹಾಲಿಗೆ ನೀರು ಬೆರೆಸಿದ ಪ್ರಕರಣದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ರೈತರಿಂದ ಮನವಿ ಸ್ವೀಕರಿಸಲಿದ್ದಾರೆ. ನಂತರ, ಅಕ್ರಮ ಗಣಿಗಾರಿಕೆ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

14ರಂದು ಮಧ್ಯಾಹ್ನ 12.30ಕ್ಕೆ ಕೆಆರ್‌ಎಸ್‌ ಜಲಾಶಯಕ್ಕೆ ಭೇಟಿ ನೀಡಿ ಅಣೆಕಟ್ಟೆಯ ಸುರಕ್ಷತೆ ಬಗ್ಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಪಾಂಡವಪುರ ತಾಲ್ಲೂಕು ಬೇಬಿಬೆಟ್ಟಕ್ಕೆ ಭೇಟಿ ನೀಡಿ ಗಣಿ ಪ್ರದೇಶದ ಪರಿಶೀಲನೆ ನಡೆಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು