ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲ ಧಗೆ

Last Updated 7 ಏಪ್ರಿಲ್ 2022, 19:25 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ದಿನೇ ದಿನೇ ಏರುತ್ತಿದೆ. ಬೇಸಿಗೆಯ ಧಗೆಯೂ ಹೆಚ್ಚುತ್ತಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ತಾಪಮಾನ 33 ರಿಂದ 36 ಡಿಗ್ರಿ ಸೆಲ್ಸಿಯಸ್ಸ್‌ ಆಸುಪಾಸಿನಲ್ಲಿದೆ.

ಕಲಬುರಗಿಯಲ್ಲಿ ಗುರುವಾರ 40.4 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖ ಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಕಳೆದ ವರ್ಷದ ಇದೇ ದಿನಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲಿ ಎರಡು ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿದೆ ಎಂದು ಹವಾಮಾನ ತಜ್ಞರು ವಿವರಿಸಿದ್ದಾರೆ.

ಬಳ್ಳಾರಿ 39.3, ರಾಯಚೂರು 39.2, ಗದಗ 37 ಮತ್ತು ಚಿತ್ರದುರ್ಗದಲ್ಲಿ 36 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

ಈ ವರ್ಷ ಕರ್ನಾಟಕದಲ್ಲಿ ವಾಡಿಕೆಗಿಂತ ತಾಪಮಾನ ಹೆಚ್ಚಾಗಿಲ್ಲ. ಸತತವಾಗಿ ವಾಡಿಕೆಗಿಂತ 5 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾದರೆ ಮಾತ್ರ ಬಿಸಿ ಗಾಳಿ ಉಂಟಾಗುತ್ತದೆ. ಇನ್ನೂ ಅಂತಹ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಕರಾವಳಿ ಪ್ರದೇಶದಲ್ಲಿ ಶುಕ್ರವಾರ ಬಿರುಗಾಳಿ, ಗುಡುಗು, ಸಿಡಿಲಿ ನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ ಜಿಲ್ಲೆಯ ಬಿಜಗರ್ಣಿಯಲ್ಲಿ ಬುಧವಾರ ರಾತ್ರಿ 8.30 ರಿಂದ ಗುರುವಾರ ಬೆಳಿಗ್ಗೆ 8.30 ರವರೆಗಿನ 24 ಗಂಟೆ ಅವಧಿಯಲ್ಲಿ ಅತ್ಯಧಿಕ 36.5 ಮಿ.ಮೀ. ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT