ಶನಿವಾರ, ಸೆಪ್ಟೆಂಬರ್ 18, 2021
30 °C

ಸಾಹಿತಿ, ಕಲಾವಿದರ ಜತೆ ಕಾಫಿಯೊಂದಿಗೆ ಸುನಿಲ್ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್‌ ಕುಮಾರ್‌ ಬುಧವಾರ 2019–20 ನೇ ಸಾಲಿನ ವಿವಿಧ ವಾರ್ಷಿಕ ಗೌರವ ಪ್ರಶಸ್ತಿ ಪಡೆದ ಇಬ್ಬರು ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಇಲಾಖಾ ಸಚಿವರಾಗಿ ಕಾರ್ಯಾರಂಭ ಮಾಡಲಿದ್ದಾರೆ.

ಈ ಕಾರ್ಯಕ್ರಮ ಬುಧವಾರ ಬೆಳಿಗ್ಗೆ 9 ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಆವರಣದಲ್ಲಿರುವ ಸಿರಿಗನ್ನಡ ಪುಸ್ತಕ ಮಳಿಗೆಗೆ ಭೇಟಿ ನೀಡಿ ಪುಸ್ತಕಗಳನ್ನು ಖರೀದಿಸಿ, ಬಳಿಕ ಕಲಾಕ್ಷೇತ್ರದ ಕ್ಯಾಂಟೀನ್‌ನಲ್ಲಿ ಸಾಹಿತಿಗಳು ಮತ್ತು ಕಲಾವಿದರೊಂದಿಗೆ ಕಾಫಿ ಸೇವಿಸುತ್ತಲೇ ಚರ್ಚೆ ನಡೆಸಲಿದ್ದಾರೆ. ಆ ಬಳಿಕ ಡಾ.ರಾಜ್‌ಕುಮಾರ್‌ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಲಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಂಧನ ಇಲಾಖೆ ಅಧಿಕಾರ ವಹಿಸಿಕೊಳ್ಳುವುದಾಗಿ ಸುನಿಲ್‌ ತಿಳಿಸಿದ್ದಾರೆ.

ಮಂಗಳವಾರ ಎರಡೂ ಇಲಾಖೆಗಳ ಅಧಿಕಾರಿಗಳಿಂದ ಅವರು ಮಾಹಿತಿ ಪಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು