ಬೆಂಗಳೂರು: 'ಇದೇ 28ರಂದು ಆಯೋಜಿಸಿರುವ 'ಕೋಟಿ ಕಂಠ ಗಾಯನ" ಕಾರ್ಯಕ್ರಮದಲ್ಲಿ ಭಾಗವಹಿಸಲು 1.10 ಕೋಟಿ ಜನರು ಹೆಸರು ನೋಂದಣಿ ಮಾಡಿಕೊಂಡಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗಿದೆ'ಎಂದು ಎಂದು ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

'ದೇಶ- ವಿದೇಶಗಳಿಂದ ಈ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಕನ್ನಡಿಗರು ಉತ್ಸಾಹದಿಂದ ಮುಂದೆ ಬಂದಿದ್ದು, 28ರಂದು ಕೋಟಿ ಕಂಠಗಳಲ್ಲಿ ಕನ್ನಡದ ವೃಂದ ಗಾಯನ ಮೊಳಗಿ ದಾಖಲೆ ಸೃಷ್ಟಿಯಾಗಲಿದೆ' ಎಂದು ಅವರು ಹೇಳಿದ್ದಾರೆ.

'ಈ ಕಾರ್ಯಕ್ರಮದ ಅಂಗವಾಗಿ ಇಲಾಖೆ ವತಿಯಿಂದ ಪ್ರತ್ಯೇಕ ಕ್ಯೂ ಆರ್ ಕೋಡ್ ಆರಂಭಿಸಲಾಗಿದ್ದು, ಇದರಲ್ಲಿ 29 ರಾಜ್ಯಗಳು ಹಾಗೂ 25 ರಾಷ್ಟ್ರಗಳಿಂದ ಕನ್ನಡ ಪ್ರೇಮಿಗಳು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದರು. ಮಂಗಳವಾರ ರಾತ್ರಿ ಕ್ಯೂ ಆರ್ ಕೋಡ್ ನಲ್ಲಿ 1.01 ಕೋಟಿ ಹೆಸರು ನೋಂದಣಿಯಾಗಿತ್ತು. ಇದೀಗ ಈ ಸಂಖ್ಯೆ 1.10 ಕೋಟಿಗೆ ತಲುಪಿದೆ. ಮುಂದಿನ ಎರಡು ದಿನಗಳಲ್ಲಿ ಈ ಸಂಖ್ಯೆ 1.50 ಕೋಟಿ ಮೀರಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

28ರಂದು ಬೆಳಗ್ಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ರಚಿತ ನಾಡಗೀತೆ 'ಜಯ ಭಾರತ ಜನನಿಯ ತನುಜಾತೆ', ಹುಯಿಲಗೊಳ ನಾರಾಯಣರಾವ್ ರಚಿತ 'ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು',ಡಾ.ಚನ್ನವೀರ ಕಣವಿ ಅವರ 'ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ', ಕುವೆಂಪು ಅವರ 'ಬಾರಿಸು ಕನ್ನಡ ಡಿಂಡಿಮವಾ', ಡಾ.ಡಿ.ಎಸ್.ಕರ್ಕಿಯವರ 'ಹಚ್ಚೇವು ಕನ್ನಡದ ದೀಪ' ಹಾಗೂ ಡಾ. ಹಂಸಲೇಖ ಅವರ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ' ಎಂಬ ಆರು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ.

ರಾಜ್ಯ, ಗಡಿನಾಡು, ಸಾಗರೋತ್ತರ ಹೊರತುಪಡಿಸಿ ರಾಜ್ಯದ ಹದಿನೈದು ಸ್ಥಳಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಧಾನಸೌಧದ ಮೆಟ್ಟಿಲು, ಗಾಂಧಿ ಪ್ರತಿಮೆ, ಹೈಕೋರ್ಟ್, ಕಂಠೀರವ ಕ್ರೀಡಾಂಗಣ, ವಿಮಾನ, ರೈಲು, ಚಿತ್ರದುರ್ಗದ ಕೋಟೆ, ಕಡಲ ತೀರಗಳಲ್ಲಿ ಕನ್ನಡದ ಗೀತೆ ಮೊಳಗಲಿದೆ.

ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಚಿವ ಸುನಿಲ್‌ಕುಮಾರ್ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಸಭೆಗಳು ನಡೆದಿವೆ. ಆಟೊ ಚಾಲಕರ ಸಂಘ, ಮಹಿಳಾ ಸ್ವಸಹಾಯ ಸಂಘ, ಸಹಕಾರಿ ಬ್ಯಾಂಕ್, ಗ್ರಾಮ ಪಂಚಾಯಿತಿ, ಐಟಿಬಿಟಿ ಉದ್ಯೋಗಿಗಳು, ವಿಶ್ವವಿದ್ಯಾಲಯ, ಶಾಲಾ- ಕಾಲೇಜು, ಚಾಲಕ ಸಂಘ ಸೇರಿದಂತೆ ಹತ್ತು ಸಾವಿರಕ್ಕೂ ಹೆಚ್ಚು ಸಂಘಟನೆಗಳ ಜತೆಗೆ ಸಚಿವರು ಸಭೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.