ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಡಳಿತದಲ್ಲಿ ಕನ್ನಡ ಅನುಷ್ಠಾನಕ್ಕೆ ಸಾಥ್: ಸರ್ಕಾರಿ ನೌಕರರ ಸಂಘದ ಅಧ್ಯಕ್ಷ

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿಕೆ
Last Updated 29 ನವೆಂಬರ್ 2022, 19:34 IST
ಅಕ್ಷರ ಗಾತ್ರ

ಬೆಂಗಳೂರು: ಆಡಳಿತದಲ್ಲಿ ಕನ್ನಡ ಭಾಷಾ ಬಳಕೆಗೆ ರಾಜ್ಯದ ನೌಕರರು ಸಂಪೂರ್ಣ ಆದ್ಯತೆ ನೀಡಿದ್ದಾರೆ. ಇನ್ನಷ್ಟು ಪರಿಣಾಮಕಾರಿ ಅನುಷ್ಠಾನಕ್ಕೆ ಸಂಘ ಶ್ರಮಿಸುತ್ತಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಂಗಳವಾರ ಹಮ್ಮಿಕೊಂಡಿದ್ದಕನ್ನಡ ರಾಜ್ಯೋತ್ಸವ ಹಾಗೂ ಕನ್ನಡ ಜನಪದ ಜಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಸರ್ಕಾರಿ ನೌಕರರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಉತ್ತಮ ಕಥೆ, ಕಾದಂಬರಿ, ಕವನ ಸಂಕಲನಗಳು ಮತ್ತು ಇತರೆ ಬರಹಗಳ ಮೂಲಕ ಗಮನ ಸೆಳೆದಿದ್ದಾರೆ. ಸಾಕಷ್ಟು ಮಹನೀಯರು ಕನ್ನಡ ಸೇವೆ ಮಾಡಿದ್ದಾರೆ. ಸಾಹಿತ್ಯ, ಸಂಸ್ಕೃತಿ, ಕಲೆಗಳಿಗೆ ಸಂಘ ಪ್ರೋತ್ಸಾಹ ನೀಡುತ್ತಾ ಬಂದಿದೆ. ಅದಕ್ಕಾಗಿ ಪ್ರತಿ ವರ್ಷ ಸ್ಪರ್ಧೆಗಳನ್ನು ಆಯೋಜಿಸುತ್ತಿದೆ. ಪ್ರತಿಭಾವಂತರನ್ನು ಗುರುತಿಸಿ, ಅವಕಾಶಗಳನ್ನು ನೀಡುತ್ತಿದೆ ಎಂದರು.

ಕರ್ನಾಟಕದಲ್ಲಿ ಕನ್ನಡಕ್ಕೆ ಹೆಚ್ಚಿನ ಆದ್ಯತೆ ದೊರಕಬೇಕು. ಮಾತೃಭಾಷೆಯ ಶಿಕ್ಷಣಕ್ಕೆ ಒತ್ತು ನೀಡಬೇಕು. ಜಾಗತೀಕರಣದ ಈ ಕಾಲಘಟ್ಟದಲ್ಲಿ ಇಂಗ್ಲಿಷ್‌ ಒಂದು ಭಾಷೆ ಯಾಗಿ ಸರ್ಕಾರಿ ಶಾಲೆಯ
ಮಕ್ಕಳಿಗೂ ಕಲಿಸಬೇಕು ಎಂದು ಸಲಹೆ ನೀಡಿದರು. ವಾಗ್ಮಿ ಪ್ರೊ.ಎಂ. ಕೃಷ್ಣೇಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಜನಪದ ಕಲಾವಿದರಾದ ಡಾ.ವೇಮಗಲ್ ನಾರಾಯಣಸ್ವಾಮಿ ಮತ್ತು ತಂಡದ
ವರು ಜನಪದ ಕಾರ್ಯಕ್ರಮ ನಡೆಸಿ ಕೊಟ್ಟರು.ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಜಾನಪದ ನೃತ್ಯ ಸ್ಪರ್ಧೆಗಳಲ್ಲಿ ವಿಜಯಿಯಾದ ಸರ್ಕಾರಿ ನೌಕರ ತಂಡಗಳಿಗೆ ನಗದು ಬಹುಮಾನ ನೀಡಿ ಪುರಸ್ಕರಿಸಲಾಯಿತು.

ಸಂಘದ ಪದಾಧಿಕಾರಿಗಳಾದ ಶ್ರೀನಿವಾಸ್‌, ವೆಂಕಟೇಶಯ್ಯ, ಮೋಹನ್‌ಕುಮಾರ್, ಮಲ್ಲಿಕಾರ್ಜುನ್‌ ಬಳ್ಳಾರಿ, ರುದ್ರಪ್ಪ, ಸದಾನಂದ್‌, ಸಿದ್ದೇಶ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT