ಸೋಮವಾರ, ಮೇ 23, 2022
27 °C

‘ರಾಜ್ಯ ಸರ್ಕಾರಕ್ಕೆ ಮೀಸಲಾತಿ ಕೊಡುವ ಪರಮಾಧಿಕಾರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಸರಘಟ್ಟ: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎಗೆ ಸೇರಿಸುವಂತೆ ಒತ್ತಾಯಿಸಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಮಾದನಾಯಕನಹಳ್ಳಿ ಗ್ರಾಮದ ಪದ್ಮಾವತಿ ಕಲ್ಯಾಣ ಮಂಟಪದಿಂದ ಗುರುವಾರ ಸಂಜೆ ಬೆಂಗಳೂರು ಕಡೆಗೆ ಸಾಗಿತು.

ಮಾಧ್ಯಮದೊಂದಿಗೆ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ’ಸರ್ಕಾರವು ನಮ್ಮ ಬೇಡಿಕೆಗೆ ಸ್ಪಂದಿಸುವ ನಿರೀಕ್ಷೆ ಇದ್ದು, ನಮ್ಮ ಹೋರಾಟ ಯಶಸ್ಸು ಕಾಣಲಿದೆ‘ ಎಂದರು.

’ರಾಜ್ಯ ಸರ್ಕಾರಕ್ಕೆ ಮೀಸಲಾತಿ ನೀಡುವ ಸಂಪೂರ್ಣ ಪರಮಾಧಿಕಾರ ಇದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಮ್ಮ ಪರಮಾಧಿಕಾರ ಉಪಯೋಗಿಸಿಕೊಂಡು ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಲಿ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು