ಶುಕ್ರವಾರ, ಮಾರ್ಚ್ 31, 2023
26 °C

ಬೆಳಗಾವಿಯಲ್ಲೇ ಪ್ರಾದೇಶಿಕ ಕಚೇರಿ ಸ್ಥಾಪಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ನಗರದಲ್ಲಿ ಪ್ರಾದೇಶಿಕ ಇ–ಮೌಲ್ಯಮಾಪನ ಕೇಂದ್ರ ಸ್ಥಾಪಿಸುವಂತೆ ಒತ್ತಾಯಿಸಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಕೇಂದ್ರ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಅವರನ್ನು ಶುಕ್ರವಾರ ದೆಹಲಿಯಲ್ಲಿ ಭೇಟಿಯಾದ ಸಚಿವರು, ಕೇಂದ್ರದ ಅಗತ್ಯತೆಯನ್ನು ಮನವರಿಕೆ ಮಾಡಿಕೊಟ್ಟರು.

‘ನಗರದಲ್ಲಿರುವ ಆದಾಯ ತೆರಿಗೆ ಕಚೇರಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಅದನ್ನು ಬೇರೆ ಕಡೆಗೆ ಸ್ಥಳಾಂತರಿಸಬಾರದು. ಬೆಳಗಾವಿ ಸೇರಿದಂತೆ ರಾಜ್ಯದಲ್ಲಿರುವ ಆದಾಯ ತೆರಿಗೆ ಕಚೇರಿಗಳನ್ನು ಮೇಲ್ದರ್ಜೆಗೇರಿಸಬೇಕು’ ಎಂದು ಒತ್ತಾಯಿಸಿದರು.

ಇಲ್ಲಿ ಪ್ರಾದೇಶಿಕ ಇ–ಮೌಲ್ಯಮಾಪನ ಕೇಂದ್ರ ಸ್ಥಾಪಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಭಾರತೀಯ ಲೆಕ್ಕಪತ್ರ ಪರಿಶೋಧಕರ ಸಂಘ ಬೆಳಗಾವಿ ಘಟಕದವರು ಸಂಸದರಿಗೆ ಈಚೆಗೆ ಮನವಿ ಸಲ್ಲಿಸಿದ್ದರು. ಅಲ್ಲದೇ, ಆದಾಯ ತೆರಿಗೆ ಕಚೇರಿ ಸ್ಥಳಾಂತರಿಸುವ ಪ್ರಸ್ತಾವ ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು