ಶುಕ್ರವಾರ, ಮೇ 7, 2021
20 °C
ಸಾರಿಗೆ ನೌಕರರ ಮುಷ್ಕರಕ್ಕೆ ಸಚಿವ ಸುರೇಶಕುಮಾರ್‌ ಪ್ರತಿಕ್ರಿಯೆ

ಸಾರಿಗೆ ನೌಕರರ ಮುಷ್ಕರ: ಹೋರಾಟಗಾರನಿಗೆ ಅಂತಃಕರಣ ಇರಬೇಕು-ಸುರೇಶ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಸಾರಿಗೆ ನೌಕರರ ಮುಷ್ಕರದ ನೇತೃತ್ವ ವಹಿಸಿಕೊಂಡ ಹೋರಾಟಗಾರನಿಗೆ ಅಂತಃಕರಣ ಹಾಗೂ ಸಮಾಜದ ಬಗ್ಗೆ ಕಾಳಜಿ ಇರಬೇಕು ಎಂದು ಶಿಕ್ಷಣ ಸಚಿವ ಎಸ್‌.ಸುರೇಶ ಕುಮಾರ್‌ ಸಲಹೆ ನೀಡಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾರಿಗೆ ಬಸ್‌ ಸಂಚರಿಸದಿದ್ದ ಸಂದರ್ಭದಲ್ಲಿಯೂ ನೌಕರರಿಗೆ ವೇತನ ನೀಡಲಾಗಿದೆ. ಒಂಬತ್ತು ಬೇಡಿಕೆಗಳ ಪೈಕಿ ವೇತನ ಪರಿಷ್ಕರಣೆ ಬಿಟ್ಟು ಎಂಟು ಬೇಡಿಕೆಗಳನ್ನು ಈಡೇರಿಸಲಾಗಿದೆ. ಆದರೂ, ಹಠ ಹಿಡಿದು ಸಾರ್ವಜನಿಕರಿಗೆ ತೊಂದರೆ ನೀಡುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.

‘ಕೊರೊನಾ ಸೋಂಕು ಕಾಣಿಸಿಕೊಂಡು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೋಂಕು ನಿಯಂತ್ರಣಕ್ಕೆ ಸರ್ಕಾರ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ಇಂತಹ ಸಂದರ್ಭದಲ್ಲಿ ಜನರಿಗೆ ಸಮಸ್ಯೆ ಆಗುವಂತೆ ಹೋರಾಟ ಮಾಡುವುದು ಸರಿಯಲ್ಲ. ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಚರ್ಚೆ ಮಾಡೋಣ. ಎಲ್ಲರೂ ಕರ್ತವ್ಯಕ್ಕೆ ಹಾಜರಾಗಿ’ ಎಂದು ಮನವಿ ಮಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು