ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಇಲಾಖೆಯಿಂದ 2 ಚಾನೆಲ್‌: ಸುರೇಶ್‌ ಕುಮಾರ್‌

Last Updated 13 ಆಗಸ್ಟ್ 2020, 12:39 IST
ಅಕ್ಷರ ಗಾತ್ರ

ಮಂಡ್ಯ: ‘ಶಿಕ್ಷಣ ಇಲಾಖೆಯಿಂದ ಶೀಘ್ರ ಎರಡು ಚಾನೆಲ್‌ ಆರಂಭಿಸಿ ಎಲ್ಲಾ ತರಗತಿಗಳ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದರು.

ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣಾ ಸಮಿತಿ ರಾಜ್ಯ ಘಟಕದ ವತಿಯಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಕೋವಿಡ್‌ ಅವಧಿಯಲ್ಲೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಉದ್ದೇಶವಾಗಿವೆ. ಆ ಮೂಲಕ ಸಮಾಜಕ್ಕೆ ಭರವಸೆ ನೀಡಲಾಗುವುದು. ಚಾನೆಲ್‌ಗಳಲ್ಲಿ ಯಾವ ಶಿಕ್ಷಕರಿಂದ ಪಾಠ ಬೋಧನೆ ಮಾಡಿಸಬೇಕು ಎಂಬ ಬಗ್ಗೆ ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದೆ’ ಎಂದರು.

‘ಮುಂದಿನ ಶೈಕ್ಷಣಿಕ ವರ್ಷ ಹೇಗೆ ಆರಂಭವಾಗಲಿದೆ ಎಂಬ ಸವಾಲು ನಮ್ಮ ಮುಂದಿದೆ. ಶಾಲೆ ಪ್ರಾರಂಭಿಸಲು ಸುರೇಶ್‌ಕುಮಾರ್‌ ತುದಿಗಾಲ ಮೇಲೆ ನಿಂತಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ. ಶಾಲೆ ಆರಂಭ ಮಾಡುವುದಕ್ಕಿಂತ ನಮ್ಮ ಮಕ್ಕಳ ಆರೋಗ್ಯ, ಮಕ್ಕಳ ಕಲಿಕೆಯೇ ನನ್ನ ಪ್ರಥಮ ಆದ್ಯತೆಯಾಗಿದೆ. ಮಕ್ಕಳು ಶಾಲೆಯ ಸಂಪರ್ಕದಲ್ಲಿ ಇರುವಂತೆ ಮಾಡಲು ವಿದ್ಯಾಗಮ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯ ಬಗ್ಗೆ ಇಡೀ ದೇಶ ನಮ್ಮ ರಾಜ್ಯದತ್ತ ತಿರುಗಿ ನೋಡುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT