ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರದಿಂದ ಸುರೇಶ್‌ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್‌ ಮಟ್ಟದಲ್ಲೂ ಚರ್ಚೆ: ಡಿಕೆಶಿ

Last Updated 14 ಮಾರ್ಚ್ 2023, 22:33 IST
ಅಕ್ಷರ ಗಾತ್ರ

ರಾಮನಗರ: ‘ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಂಸದ ಡಿ.ಕೆ. ಸುರೇಶ್‌ ಮೇಲೆ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಈ ಬಗ್ಗೆ ಹೈಕಮಾಂಡ್‌ ಮಟ್ಟದಲ್ಲೂ ಚರ್ಚೆ ನಡೆದಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ನಗರದಲ್ಲಿ ಮಂಗಳವಾರ ಪತ್ರಕರ್ತರಿಗೆ ಪ್ರತಿಕ್ರಿಯಿಸಿದ ಅವರು, ‘ಸುರೇಶ್‌ ಈ ಹಿಂದೆ ಯಾವತ್ತೂ ಸ್ಟೇಜ್‌ ಹತ್ತಿರಲಿಲ್ಲ. ಆದರೂ ಲೋಕಸಭಾ ಚುನಾವಣೆಗೆ ಸೋನಿಯಾ ಗಾಂಧಿ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸುರೇಶ್‌ ಹೆಸರು ಘೋಷಣೆ ಮಾಡಿದರು. ರಾಜಕೀಯದಲ್ಲಿ ಕೆಲವೊಂದು ಅನಿವಾರ್ಯ ಸಂದರ್ಭ ಎದುರಾಗುತ್ತದೆ. ಆಗ ಜನ ಹೇಳಿದಂತೆ ನಾವು ಕೇಳಬೇಕಾಗುತ್ತದೆ’ ಎಂದರು.

ಈಚೆಗೆ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಪುತ್ರನಿಗೆ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯಿಸಿ ‘ಈ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಡ್ಜ್‌. ನಾನು ಧ್ರುವನಾರಾಯಣ ಪುತ್ರನ ಪರ ವಕೀಲ. ಅಂತಿಮ ದರ್ಶನಕ್ಕೆ ಸ್ವತಃ ಖರ್ಗೆ ಬಂದಿದ್ದರು. ಅಭಿಮಾನಿಗಳ ಆಕ್ರಂದನ ನೋಡಿದ್ದರು. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ’ ಎಂದರು.

‘ಸ್ಪರ್ಧಿಸುವ ಹಕ್ಕಿದೆ’: ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಿಂದ ಸಂಸದ ಡಿ.ಕೆ. ಸುರೇಶ್ ಸ್ಪರ್ಧೆ ಕುರಿತು ಚನ್ನರಾಯನಪಟ್ಟಣ ವಡ್ಡರಹಳ್ಳಿಯಲ್ಲಿ ಪ್ರತಿಕ್ರಿಯಿಸಿದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ,‘ಯಾರು, ಎಲ್ಲಿ ಬೇಕಾದರೂ ಸ್ಪರ್ಧಿಸುವ ಹಕ್ಕಿದೆ. ಸ್ಪರ್ಧಿಸುವುದು, ಬಿಡುವುದು ಅವರ ಪಕ್ಷಕ್ಕೆ ಸೇರಿದ್ದು’ ಎಂದು ಅವರು ಹೇಳಿದರು.

ಕಾಂಗ್ರೆಸ್‌– ಬಿಜೆಪಿ ಒಟ್ಟಾಗಿ ಸಂಚು: ನಿಖಿಲ್‌
ಜೆಡಿಎಸ್ ವಿರುದ್ಧ ರಾಮನಗರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಟ್ಟಾಗಿ ರಾಜಕೀಯ ಲೆಕ್ಕಾಚಾರ ಮಾಡುತ್ತಿವೆ. ಅಂತಿಮವಾಗಿ ಮತದಾರರು ತೀರ್ಮಾನಿಸುತ್ತಾರೆ ಎಂದು ರಾಮನಗರ ಕ್ಷೇತ್ರದ ಜೆಡಿಎಸ್‌ ಸಂಭಾವ್ಯ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ರಾಮನಗರ ಕ್ಷೇತ್ರದಿಂದ ಡಿ.ಕೆ. ಸುರೇಶ್ ಸ್ಪರ್ಧೆ ಕುರಿತು ಮಂಗಳವಾರ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದರು.

‘ಮಂಡ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ರೈತ ಸಂಘದವರು ಸೇರಿ ಚಕ್ರವ್ಯೂಹ ರಚಿಸಿ ನನ್ನನ್ನು ಸೋಲಿಸಿದ್ದರು. ಆದರೆ 5 ಲಕ್ಷಕ್ಕೂ ಹೆಚ್ಚು ಮತ ಪಡೆದಿದ್ದೆ. ಅಭ್ಯರ್ಥಿಗಳನ್ನು ನಿರ್ಧರಿಸುವುದು ಆಯಾ ಪಕ್ಷಕ್ಕೆ ಬಿಟ್ಟ ವಿಚಾರ. ಅದನ್ನು ಅವರ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT