ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಉಲ್ಬಣ: ಕರ್ನಾಟಕದಲ್ಲಿ ಹೊಸವರ್ಷ ಸಂಭ್ರಮಾಚರಣೆಗೆ ಬೀಳಲಿದೆಯಾ ಬ್ರೇಕ್?

Last Updated 6 ಡಿಸೆಂಬರ್ 2021, 5:53 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿರುವುದರಿಂದ ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಸಂಭ್ರಮಾಚರಣೆಗೆ ಸರ್ಕಾರ ನಿರ್ಬಂಧಹೇರಲಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಕಳೆದ ಒಂದೇ ದಿನ ಕರ್ನಾಟಕದಲ್ಲಿ 456 ಕೋವಿಡ್ ಪ್ರಕರಣಗಳು ದೃಢಪಟ್ಟು, 6 ಜನ ಸಾವಿಗೀಡಾಗಿದ್ದಾರೆ. ಅಲ್ಲದೇ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದೇ ವಾರದಲ್ಲಿ ಸೋಂಕು ತಗುಲಿರುವುದು ಆತಂಕ ಹೆಚ್ಚುವಂತೆ ಮಾಡಿದೆ.

ಇನ್ನೊಂದೆಡೆ ಕೊರೊನಾವೈರಸ್‌ನ ರೂಪಾಂತರಿ ತಳಿಯಾದ ಓಮೈಕ್ರಾನ್‌ನ ಎರಡು ಪ್ರಕರಣಗಳು ಕರ್ನಾಟಕದಲ್ಲಿ ವರದಿಯಾಗಿದ್ದು ಈ ಸೋಂಕು ತಡೆಯಲು ಸರ್ಕಾರ ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕುವ ಸಾದ್ಯತೆ ಇದೆ ಎನ್ನಲಾಗಿದೆ

ಒಂದೇ ವಾರದಲ್ಲಿ ಕೊಡಗು, ಹಾವೇರಿ, ಧಾರವಾಡ, ದಾವಣಗೆರೆ, ಮಂಡ್ಯ, ಮೈಸೂರಲ್ಲಿ ಕೋವಿಡ್ ಪ್ರಕರಣಗಳು ದ್ವೀಗುಣಗೊಂಡಿವೆ. ಅಲ್ಲದೆ ಶಿವಮೊಗ್ಗ ಹಾಗೂ ಕೊಪ್ಪಳದಲ್ಲಿ ಒಂದೇ ದಿನದಲ್ಲಿ ನಾಲ್ಕು ಪಟ್ಟು ಹೆಚ್ಚಳವಾಗಿವೆ.

ಕಳೆದ ನವೆಂಬರ್ ಕೊನೆಯ ವಾರದಲ್ಲಿ ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಾ ಕ್ರಮಗಳನ್ನು ತೆರವುಗೊಳಿಸಲಾಗಿತ್ತು. ಇದೀಗ ಮತ್ತೆ ಕೋವಿಡ್ ತಡೆಯಲು ಬಿಗಿ ನಿಯಂತ್ರಣಾ ಕ್ರಮಗಳು ಜಾರಿಯಾಗುವ ಮುನ್ಸೂಚನೆ ಕಾಣುತ್ತಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT