ಶುಕ್ರವಾರ, ಮೇ 27, 2022
30 °C

ಡ್ರೋನ್ ಮೂಲಕ ವಕ್ಫ್ ಆಸ್ತಿಗಳ ಸರ್ವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯದಲ್ಲಿರುವ ವಕ್ಫ್ ಆಸ್ತಿಗಳ ಸಮೀಕ್ಷೆಯನ್ನು ಡ್ರೋನ್ ಮೂಲಕ ಶೀಘ್ರ ಆರಂಭಿಸಲಾಗುವುದು’ ಎಂದು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಎನ್.ಕೆ. ಮುಹಮ್ಮದ್ ಶಾಫಿ ಸಅದಿ ತಿಳಿಸಿದ್ದಾರೆ.

‘ಆಸ್ತಿಗಳ ನಕ್ಷೆಯನ್ನು ಸಿದ್ಧಪಡಿಸಿ ಸಂರಕ್ಷಿಸಲು ಸರ್ಕಾರದ ವತಿಯಿಂದ ₹2.5 ಕೋಟಿ ಅನುದಾನ ಬಿಡುಗಡೆಯಾ
ಗಿದೆ’ ಎಂದು ಅವರು ತಿಳಿಸಿದ್ದಾರೆ.

‘ರಾಜ್ಯದಲ್ಲಿ ವಕ್ಫ್ ಆಸ್ತಿಗಳ ಮೊದಲ ಹಂತದ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಎರಡನೇ ಹಂತದ ಸಮೀಕ್ಷೆ ಕಾರ್ಯವು ಮುಕ್ತಾಯದ ಹಂತದಲ್ಲಿದೆ. ಜತೆಗೆ ಆಸ್ತಿಗಳ ನಕ್ಷೆಗಳ ಸಂರಕ್ಷಣಾ ಕಾರ್ಯಕ್ಕೂ ಮಂಡಳಿ ವತಿಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು