ಬಸವಾತ್ಮಜೆ ಪ್ರಶಸ್ತಿಗೆ ಸುಶೀಲಮ್ಮ ಆಯ್ಕೆ

ಬಾಗಲಕೋಟೆ: ಕೂಡಲಸಂಗಮದ ಬಸವ ಧರ್ಮ ಪೀಠವು ಮಾತೆ ಮಹಾದೇವಿ ಅವರ ಸ್ಮರಣಾರ್ಥ ನೀಡುವ ‘ಬಸವಾತ್ಮಜೆ ಪ್ರಶಸ್ತಿ’ಗೆ ಬೆಂಗಳೂರಿನ ಸುಮಂಗಲಿ ಸೇವಾಶ್ರಮದ ಮುಖ್ಯಸ್ಥೆ ಎಸ್.ಜಿ.ಸುಶೀಲಮ್ಮ ಅವರನ್ನು ಆಯ್ಕೆ ಮಾಡಲಾಗಿದೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿವರ ಪ್ರಕಟಿಸಿದ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ, ಜನವರಿ 13 ರಂದು ಕೂಡಲಸಂಗಮ ದಲ್ಲಿ ನಡೆಯುವ ಶರಣ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶಸ್ತಿ ಪ್ರದಾನ ಮಾಡು ವರು ಎಂದು ತಿಳಿಸಿ ದರು.
ಪ್ರಶಸ್ತಿಯು ₹51 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಶರಣರು ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.