ಶುಕ್ರವಾರ, ಮೇ 14, 2021
31 °C

ಕೋವಿಡ್-19: ರೆಮ್‌ಡಿಸಿವಿರ್ ಔಷಧ ಪೂರೈಕೆ ಹೊಣೆ ಎಸ್‌ಎಎಸ್‌ಟಿಗೆ -ಸಚಿವ ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರೆಮ್‌ಡಿಸಿವಿರ್ ಔಷಧದ ಸಮರ್ಪಕ ಪೂರೈಕೆ ಸಲುವಾಗಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಎಸ್‌ಎಎಸ್‌ಟಿ) ಅನ್ನು ನೋಡಲ್ ಏಜೆನ್ಸಿಯನ್ನಾಗಿ ನಿಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ತಿಳಿಸಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಅವರು, ಸರ್ಕಾರಿ ಆಸ್ಪತ್ರೆಗಳಿಗೆ ಹಾಗೂ ಸರ್ಕಾರ ಶಿಫಾರಸ್ಸು ಮಾಡಿರುವ ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಅವಶ್ಯಕ ರೆಮ್‌ಡಿಸಿವಿರ್ ಔಷಧ ಸರಬರಾಜು ಮಾಡಲು ಎಸ್‌ಎಎಸ್‌ಟಿಗೆ ಹೊಣೆಗಾರಿಕೆ ನೀಡಲಾಗಿದೆ ಎಂದಿದ್ದಾರೆ.

ಸ್ವಯಂ ಪ್ರೇರಿತರಾಗಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಸೋಂಕಿತರ ಚಿಕಿತ್ಸೆಗೆ ರೆಮ್‌ಡಿಸಿವಿರ್ ಔಷಧ ಪೂರೈಸಲು ಉಪ ಔಷಧ ನಿಯಂತ್ರಕರಾದ ಕೆಂಪಯ್ಯ ಸುರೇಶ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಸೋಂಕಿತರ ಎಸ್‌ಆರ್‌ಎಫ್‌ ಐಡಿ ಮುಂತಾದ ವಿವರಗಳನ್ನು ಇಮೇಲ್ ಅಥವಾ ವಾಟ್ಸ್‌ಆ್ಯಪ್‌ ಮೂಲಕ ಒದಗಿಸಿ ಔಷಧ ಪಡೆಯಬಹುದಾಗಿದೆ ಎಂದೂ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು