ಮಂಗಳವಾರ, ಜೂನ್ 22, 2021
29 °C

ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿ ಎಸ್.ವಿ. ರಾಮಚಂದ್ರ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಗಳೂರು ಶಾಸಕರಾದ ಎಸ್.ವಿ. ರಾಮಚಂದ್ರ ಅವರು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದರು.

ನಂತರ ಅಧಿಕಾರಿಗಳೊಂದಿಗೆ ಅನೌಪಚಾರಿಕವಾಗಿ ಸಭೆ ನಡೆಸಿ, ನಿಗಮದ ಕ್ರಿಯಾ ಯೋಜನೆ ಕುರಿತು ಚರ್ಚಿಸಿ, ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ರೂಪಿಸಿರುವ ಭೂ ಒಡೆತನ, ಗಂಗಕಲ್ಯಾಣ, ಸ್ವಯಂ ಉದ್ಯೋಗ, ಮೈಕ್ರೋ ಕ್ರೆಡಿಟ್ ಯೋಜನೆ, ನಿರುದ್ಯೋಗಿ ಯುವಕ -ಯುವತಿಯರಿಗೆ ಉದ್ಯಮ ಶೀಲತಾ ಯೋಜನೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಶ್ರಮಿಸಲಾಗುವುದು.

ಜಿಲ್ಲಾ ಪ್ರವಾಸ ಕೈಗೊಂಡ ಪ್ರಗತಿ ಪರಿಶೀಲನೆ ನಡೆಸಿ, ತಾಂತ್ರಿಕ ಸಮಸ್ಯೆಗಳ ಇತ್ಯರ್ಥಕ್ಕೂ ಶ್ರಮಿಸಲಾಗುವುದು. ನಿಗಮದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಮುದಾಯದ ಏಳಿಗೆಗಾಗಿ ಸ್ವಯಂ ಪ್ರೇರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಹನುಮನರಸಯ್ಯ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.