ಬೆಂಗಳೂರು: ಮಾಸ್ಕ್ ಧರಿಸದ ಮತ್ತು ಅಂತರ ಕಾಪಾಡದವರ ವಿರುದ್ಧ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಹೇಳಿದೆ.

ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 35 ಪ್ರತಿಭಟನೆಗಳು ನಡೆದಿವೆ. ಮಾಸ್ಕ್ ಧರಿಸಬೇಕು, ಅಂತರ ಕಾಪಾಡಿಕೊಳ್ಳಬೇಕು ಎಂಬ ನಿಯಮ ಇಲ್ಲಿ ಪಾಲನೆಯೇ ಆಗಿಲ್ಲ. ಈ ರೀತಿಯ ಪ್ರತಿಭಟನೆಗಳನ್ನು ನಿರ್ಬಂಧಿಸಬೇಕು ಎಂದು ಕೋರಿ ಸಾಯಿದತ್ತ ಸಲ್ಲಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ಸೆಪ್ಟೆಂಬರ್ 25ರಂದು ನಡೆದ ಪ್ರತಿಭಟನೆ ಆಯೋಜಕರಲ್ಲಿ ಒಬ್ಬರಾದ ಹೋರಾಟಗಾರ ಮಾರುತಿ ಮಾನ್ಪಡೆ ಕೋವಿಡ್ನಿಂದ ಮೃತಪಟ್ಟಿದ್ದಾರೆ’ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು.

‘ಪ್ರತಿಭಟನೆಯ ಚಿತ್ರಗಳನ್ನು ನೋಡಿದರೆ ಮಾಸ್ಕ್ ಧರಿಸದ ಹಲವರು ಕಾಣಿಸುತ್ತಾರೆ. ಅಂತರ ಕಾಪಾಡಬೇಕು ಎಂಬ ನಿಯಮ ಸಂಪೂರ್ಣ ಉಲ್ಲಂಘನೆಯಾಗಿದೆ. ಇದು ಕೋವಿಡ್ ಹರಡಲು ಕಾರಣವಾಗಿದೆ. ಈ ರೀತಿಯ ಉಲ್ಲಂಘನೆ ತಡೆಯಲು ರಾಜ್ಯ ಸರ್ಕಾರ ಮತ್ತು ಸಂಬಂಧಿಸಿದ ಪ್ರಾಧಿಕಾರಿಗಳು ದೊಡ್ಡದಾಗಿ ಕಾರ್ಯಾಚರಣೆಗೆ ಇಳಿಯಬೇಕು. ನಿಯಮ ಪಾಲಿಸದವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು’ ಎಂದು ಪೀಠ ತಿಳಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.