ಮಂಗಳವಾರ, ಜನವರಿ 26, 2021
22 °C

ಸಾವಿರ ಜನಕ್ಕೆ ಸೀಮಿತವಾಗಿ ಪಂಚಲಿಂಗ ದರ್ಶನ: ಬಿ.ಎಸ್‌.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕೋವಿಡ್‌–19 ಪರಿಸ್ಥಿತಿಯಿಂದಾಗಿ ಒಂದು ಸಾವಿರ ಜನರಿಗೆ ಸೀಮಿತಗೊಳಿಸಿ, ಈ ಬಾರಿ ಸರಳವಾಗಿ ಪಂಚಲಿಂಗ ದರ್ಶನ ಮಹೋತ್ಸವ ಆಯೋಜಿಸಲು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಬುಧವಾರ ಜಿಲ್ಲೆಯ ತಲಕಾಡಿನಲ್ಲಿ ನಡೆದ ಪಂಚಲಿಂಗ ದರ್ಶನ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

‘ಪಂಚಲಿಂಗ ದರ್ಶನಕ್ಕೆ ಅಗತ್ಯವಿರುವ ಕೆಲಸ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕು. ತಲಕಾಡು ಅಭಿವೃದ್ಧಿಗೆ ಬೇಕಾಗುವ ಶಾಶ್ವತ ಕೆಲಸಗಳನ್ನು ನಂತರ ಕೈಗೆತ್ತಿಕೊಳ್ಳಿ. ತರಾತುರಿಯಲ್ಲಿ ಮಾಡುವುದು ಬೇಡ’ ಎಂದು ಯಡಿಯೂರಪ್ಪ ಸೂಚನೆ ನೀಡಿದರು.

ಪಂಚಲಿಂಗ ದರ್ಶನ ಕಾರ್ಯಕ್ರಮಗಳು ಡಿ.10 ರಿಂದ 19ರ ವರೆಗೆ ನಡೆಯಲಿವೆ. ಡಿ.14 ರಂದು ಪಂಚಲಿಂಗ ದರ್ಶನ ಮಹೋತ್ಸವ ಇರಲಿದೆ. 2013 ರಲ್ಲಿ ಕೊನೆಯದಾಗಿ ನಡೆದಿದ್ದ ಪಂಚಲಿಂಗ ದರ್ಶನ ಮಹೋತ್ಸವದಲ್ಲಿ ಸುಮಾರು 20 ಲಕ್ಷ ಜನ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು