ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಧ ವಿದ್ಯಾರ್ಥಿಗಳಿಗೆ ‘ಟಾಕಿಂಗ್‌ ಲ್ಯಾಪ್‌ಟಾಪ್’ ವಿತರಿಸಲು ಯೋಜನೆ

Last Updated 16 ಆಗಸ್ಟ್ 2021, 21:15 IST
ಅಕ್ಷರ ಗಾತ್ರ

ಬೆಂಗಳೂರು: ಅಂಧ ವಿದ್ಯಾರ್ಥಿಗಳಿಗೆ ಉಚಿತವಾಗಿ ‘ಟಾಕಿಂಗ್ ಲ್ಯಾಪ್‌ಟಾಪ್‌’ ವಿತರಿಸಲು ಸಮಗ್ರ ಯೋಜನೆ ರೂಪಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ನಗರದ ವಕೀಲ ಎಸ್. ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ಲ್ಯಾಪ್‌ಟಾಪ್ ವಿತರಣೆಗೆ ಪೀಠ ಆದೇಶ ನೀಡಿತ್ತು. ನ್ಯಾಯಾಲಯದ ಆದೇಶಗಳನ್ನು ಪಾಲಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಅವರು ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಸರ್ಕಾರದಿಂದ ವಿವರಣೆ ಕೇಳಿತ್ತು.

‘ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ವಿತರಿಸುವ ಯೋಜನೆಗೆ ಅನುದಾನವನ್ನು ಕ್ರಮೇಣ ಕಡಿಮೆ ಮಾಡಲಾಗುತ್ತಿದೆ. 2014–15ರಲ್ಲಿ ₹4 ಕೋಟಿ ನೀಡಲಾಗಿತ್ತು. 2015–16ರಲ್ಲಿ ಅದನ್ನು ₹3.5 ಕೋಟಿಗೆ ಇಳಿಸಲಾಗಿತ್ತು. 2019–20ರಲ್ಲಿ ₹2.4 ಕೋಟಿಗೆ ಇಳಿಸಲಾಗಿದೆ’ ಎಂದು ಅರ್ಜಿದಾರರು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT