ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು ಕಾರ್ಯಕರ್ತರ ಪ್ರತಿಭಟನೆ: ಮೇಕೆದಾಟು ಪ್ರದೇಶದಲ್ಲಿ ಪೊಲೀಸ್ ಕಾವಲು

Last Updated 28 ಮಾರ್ಚ್ 2021, 6:00 IST
ಅಕ್ಷರ ಗಾತ್ರ

ರಾಮನಗರ: ತಮಿಳುನಾಡಿನ ಕಾವೇರಿ ಹಿತರಕ್ಷಣಾ ಸಮಿತಿ ಸದಸ್ಯರ‌ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಕನಕಪುರದ ಮೇಕೆದಾಟು ಹಾಗೂ ಸುತ್ತಲಿನ ಪ್ರದೇಶಕ್ಕೆ ಪೊಲೀಸರು ಭದ್ರತೆ ಒದಗಿಸಿದ್ದಾರೆ.

ಮೇಕೆದಾಟು ಅಣೆಕಟ್ಟೆ ನಿರ್ಮಾಣ ವಿರೋಧಿಸಿ ತಮಿಳುನಾಡು ಕಾವೇರಿ ಹಿತರಕ್ಷಣ ಸಮಿತಿ ಪ್ರಧಾನ ಕಾರ್ಯದರ್ಶಿ ಪಾಂಡೇಯನ್ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾಗಿದ್ದರು. ಮೇಕೆದಾಟಿನತ್ತ ಹೊರಟಿದ್ದ ಅವರನ್ನು ತಮಿಳುನಾಡು ಪೊಲೀಸರು ತಂಜಾವೂರಿನಲ್ಲಿ ಬಂಧಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಮೇಕೆದಾಟು‌ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಕಾವಲಿದ್ದು, ಪ್ರತಿ ವಾಹನವನ್ನು ತಪಾಸಣೆ ಮಾಡಿ ಒಳಬಿಡಲಾಗುತ್ತಿದೆ.

ಚನ್ನಪಟ್ಟಣ ಡಿವೈಎಸ್ಪಿ‌ ನೇತೃತ್ವದಲ್ಲಿ 5 ಇನ್ ಸ್ಪೆಕ್ಟರ್, 12 ಎಸ್ ಐ, 25 ಎಎಸ್ ಐ ಹಾಗೂ 106 ಕಾನ್ ಸ್ಟೆಬಲ್ ಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT