ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ನದಿ ಜೋಡಣೆ ಯೋಜನೆಯನ್ನು ತಮಿಳುನಾಡು ನಿಲ್ಲಿಸಬೇಕು: ಸಿದ್ದರಾಮಯ್ಯ ಆಗ್ರಹ

Last Updated 22 ಫೆಬ್ರುವರಿ 2021, 8:36 IST
ಅಕ್ಷರ ಗಾತ್ರ

ಬೆಂಗಳೂರು: ತಮಿಳುನಾಡು ಕೈಗೊಂಡಿರುವ ಕಾವೇರಿ-ವೆಲ್ಲಾರು-ವೈಗೈ-ಗುಂಡಾರು ನದಿ ಜೋಡಣೆ ಯೋಜನೆಯನ್ನು ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

'ಕಾವೇರಿ: ತಮಿಳುನಾಡು ವಿರುದ್ಧ ಚಕಾರವೆತ್ತದ ರಾಜ್ಯ!' ಶೀರ್ಷಿಕೆಯಲ್ಲಿ 'ಪ್ರಜಾವಾಣಿ' ಭಾನುವಾರ (ಫೆ.21)ಪ್ರಕಟಿಸಿದ್ದ ವರದಿಯನ್ನು ಉಲ್ಲೇಖಿಸಿಟ್ವೀಟ್‌ ಮಾಡಿರುವ ಅವರು, ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರು‌ಮಾಡಲು ಹೊರಟಿರುವುದು ಖಂಡನೀಯ. ಆ ಅಕ್ರಮವನ್ನು ತಕ್ಷಣ ನಿಲ್ಲಿಸಬೇಕೆಂದು ಆ ರಾಜ್ಯದ ಮುಖ್ಯಮಂತ್ರಿಗಳನ್ನು ಅಗ್ರ ಹಿಸುತ್ತೇನೆ,' ಎಂದಿದ್ದಾರೆ.

ಈ ವಿಚಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರುಅವರು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುವ ಜೊತೆಯಲ್ಲಿ ಆ ರಾಜ್ಯದ ಮುಖ್ಯಮಂತ್ರಿಯವರಿಗೆ ಪತ್ರಬರೆದು ಯೋಜನೆಯನ್ನು ಕೈಬಿಡಬೇಕೆಂದು ಒತ್ತಾಯಿಸಬೇಕು.

ಇವುಗಳನ್ನು ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT