ಮಂಗಳವಾರ, ಸೆಪ್ಟೆಂಬರ್ 28, 2021
26 °C

ಕರ್ನಾಟಕದಲ್ಲಿ ಅಂತರ್ಜಾಲ ಸಂಪರ್ಕ ಸುಧಾರಣೆಗೆ ಕಾರ್ಯಪಡೆ ರಚಿಸಿದ ಕೇಂದ್ರ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕರ್ನಾಟಕದಲ್ಲಿ ಅಂತರ್ಜಾಲ ಸಂಪರ್ಕ ಸುಧಾರಣೆಗೆ ಸಂಬಂಧಿಸಿ ಕಾರ್ಯಪಡೆಯೊಂದನ್ನು ರಚಿಸಲಾಗಿದೆ ಎಂದು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಿರ್ದೇಶನದ ಮೇರೆಗೆ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಖಾತೆ ಸಚಿವ ರಾಜೀವ್ ಚಂದ್ರಶೇಖರ್ ಇತ್ತೀಚೆಗೆ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿದ್ದರು. ಆ ಸಂದರ್ಭದಲ್ಲಿ ಪ್ರತಿಯೊಂದು ಜಿಲ್ಲೆಗಳಲ್ಲಿಯೂ ಕೆಲವು ಭಾಗಗಳಲ್ಲಿ ಅಂತರ್ಜಾಲ ಸಂಪರ್ಕ ಲಭ್ಯತೆ ಮತ್ತು ವೇಗದ ಸುಧಾರಣೆಗೆ ಹಲವಾರು ಮನವಿಗಳನ್ನು ಸ್ವೀಕರಿಸಲಾಗಿತ್ತು. ಪ್ರತಿಯೊಂದು ಜಿಲ್ಲೆಗಳಲ್ಲೂ ಆ ಬಗ್ಗೆ ಅಧ್ಯಯನ ನಡೆಸಲು ಕಾರ್ಯಪಡೆಯನ್ನು ಕಳುಹಿಸುವುದಾಗಿ ಸಚಿವರು ಭರವಸೆ ನೀಡಿದ್ದರು ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಓದಿ: 

‘ಸಚಿವರು ನೀಡಿದ್ದ ಭರವಸೆಯಂತೆ ನ್ಯಾಷನಲ್ ಇಂಟರ್ನೆಟ್ ಎಕ್ಸ್‌ಚೇಂಜ್ ಆಫ್ ಇಂಡಿಯಾ (ಎನ್‌ಐಎಕ್ಸ್‌ಐ) ಮತ್ತು ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ (ಎಸ್‌ಟಿಪಿಐ) ಪ್ರತಿನಿಧಿಗಳನ್ನು ಒಳಗೊಂಡ ಕಾರ್ಯಪಡೆಯನ್ನು ರಚನೆ ಮಾಡಲಾಗಿದೆ. ಕಾರ್ಯಪಡೆಯ ಸದಸ್ಯರು ಪ್ರತಿ ಜಿಲ್ಲೆಗೂ ಭೇಟಿ ನೀಡಿ ಜನರ ಸಮಸ್ಯೆ ಆಲಿಸಲಿದ್ದಾರೆ. ಅವರು ರಾಜ್ಯ ಸರ್ಕಾರಿ ಅಧಿಕಾರಿಗಳನ್ನೂ ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ ಮತ್ತು ಸಚಿವರಿಗೆ ವರದಿಯನ್ನು ಸಲ್ಲಿಸಲಿದ್ದಾರೆ’ ಎಂದು ಸಚಿವಾಲಯ ತಿಳಿಸಿದೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು