ಶನಿವಾರ, ಏಪ್ರಿಲ್ 1, 2023
23 °C

ತಾವರ್‌ಚಂದ್‌ ಗೆಹ್ಲೋಟ್‌ ನೂತನ ರಾಜ್ಯಪಾಲ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ತಾವರ್‌ಚಂದ್‌ ಗೆಹ್ಲೋಟ್‌ ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕಗೊಳ್ಳುವ ಸಾಧ್ಯತೆ ಇದೆ.

ಹಾಲಿ ರಾಜ್ಯಪಾಲ ವಜುಭಾಯಿವಾಲಾ ಅವರ ಅವಧಿ ಪೂರ್ಣಗೊಂಡಿದೆ. ಅವರ ಸ್ಥಾನಕ್ಕೆ ಗೆಹ್ಲೋಟ್‌ ಅವರನ್ನು ನೇಮಕ ಮಾಡಲು ನಿರ್ಧರಿಸಿದ್ದು ಸದ್ಯದಲ್ಲೇ ಆದೇಶ ಹೊರಬೀಳಲಿದೆ. ಕೇಂದ್ರ ಸಂಪುಟ ಪುನರ್‌ರಚನೆ ವೇಳೆ ಗೆಹ್ಲೋಟ್‌ ಅವರನ್ನು ಕೈಬಿಡಲಿದ್ದು, ಅವರಿಗೆ ರಾಜ್ಯಪಾಲ ಹುದ್ದೆ ನೀಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಗೆಹ್ಲೋಟ್‌, ಈಗ ರಾಜ್ಯಸಭೆಯ ಸದಸ್ಯರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು