ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅವರು ಜುಲೈ 11ರಂದು (ಭಾನುವಾರ) ಬೆಳಿಗ್ಗೆ 10:30ಕ್ಕೆ ರಾಜ ಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ. ಹಾಲಿ ರಾಜ್ಯಪಾಲ ವಜುಭಾಯಿವಾಲಾ ಅವರ ಅವಧಿ ಪೂರ್ಣಗೊಂಡಿದೆ.

ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವರಾಗಿದ್ದ ತಾವರ್‌ಚಂದ್ ಅವರು ಇತ್ತೀಚೆಗಷ್ಟೇ ರಾಜಸಭೆ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು.

ತಾವರ್‌ಚಂದ್ ಗೆಹ್ಲೋಟ್, ಮಧ್ಯಪ್ರದೇಶದ ನಾಗ್ಡಾದವರು. ಮೂರು ಬಾರಿ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಗೆಹ್ಲೋಟ್, ರಾಜ್ಯಸಭೆಯ ಸದಸ್ಯರಾಗಿದ್ದರು. ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿದ್ದರು.

ಇದನ್ನೂ ಓದಿ: ಕೇಂದ್ರ ಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? ಇಲ್ಲಿದೆ ವಿವರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.