ಬುಧವಾರ, ಜೂನ್ 29, 2022
24 °C

ಆದಾಯ ತೆರಿಗೆ ವಂಚನೆ: ಬೆಂಗಳೂರಿನ ಶೈಕ್ಷಣಿಕ ಸಂಸ್ಥೆಗಳ ಮೇಲೆ‌ ಐಟಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಕೆಲ‌‌ವು ಶೈಕ್ಷಣಿಕ ಸಂಸ್ಥೆಗಳ ಮೇಲೆ‌ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಗುರುವಾರ ಬೆಳ್ಳಂಬೆಳ್ಳಗೆ ದಾಳಿ ನಡೆಸಿದ್ದಾರೆ.

ನಗರದಲ್ಲಿರುವ ದಿವ್ಯಶ್ರೀ ಗ್ರೂಪ್‌,‌ ರೇವಾ ಯೂನಿವರ್ಸಿಟಿ ಮತ್ತು ಕೃಷ್ಣದೇವರಾಯ ಇನ್ ಸ್ಟಿಟ್ಯೂಟ್ ಮೇಲೆ ಐಟಿ ದಾಳಿ ನಡೆದಿದೆ. ಅಧಿಕಾರಿಗಳು ಸುಮಾರು 45ಕ್ಕೂ ಹೆಚ್ಚು ಕಡೆ ಐಟಿ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಇದೆ.

ಆದಾಯ ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಬೆಂಗಳೂರಿನ ದಿವ್ಯ ಶ್ರೀ ಗ್ರೂಪ್​ನ ಹಲವು ಬ್ರಾಂಚ್​ಗಳ ಮೇಲೆ ದಾಳಿ ನಡೆಸಿ, ಅಧಿಕಾರಿಗಳು ಪರಿಶೀಲನೆ‌ ನಡೆಸುತ್ತಿದ್ದಾರೆ. ಹೆಚ್ಚಿನ ವಿವರ ನೀಡಲು ಐಟಿ ಅಧಿಕಾರಿಗಳು ನಿರಾಕರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು