ಸೋಮವಾರ, ಡಿಸೆಂಬರ್ 5, 2022
19 °C

ಮುರುಘಾ ಶರಣರ ವಿರುದ್ಧ ಪ್ರಕರಣಕ್ಕೆ ಪ್ರಚೋದನೆ: ಶಿಕ್ಷಕ ಪೊಲೀಸ್ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಂತ್ರಸ್ತ  ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಪ್ರಚೋದನೆ ನೀಡಿದ ಆರೋಪದ ಮೇರೆ ಶಿಕ್ಷಕರೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಜುಂಜವಾಡಿ ನಿವಾಸಿ ಬಸವರಾಜೇಂದ್ರ ಪೊಲೀಸರ ವಶದಲ್ಲಿರುವ ಆರೋಪಿ. ಇವರು ಮಠದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದರು.

ವಿದ್ಯಾರ್ಥಿನಿಯರಿಗೆ ಪ್ರಚೋದನೆ ನೀಡಿ ದೂರು ದಾಖಲಿಸಲಾಗಿದೆ ಎಂದು ಆರೋಪಿಸಿ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಬುಧವಾರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಮಠದ ಉದ್ಯೋಗಿ ಗಾಯತ್ರಿ ಹಾಗೂ ಒಡನಾಡಿ ಸೇವಾ ಸಂಸ್ಥೆ ವಿರುದ್ಧವೂ ದೂರು ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು