ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೆಂಬರ್‌ 5ರಿಂದ ಶಿಕ್ಷಕರ ವರ್ಗಾವಣೆ: ಸಚಿವ ಎಸ್‌. ಸುರೇಶ್‌ಕುಮಾರ್

Last Updated 22 ಅಕ್ಟೋಬರ್ 2020, 2:25 IST
ಅಕ್ಷರ ಗಾತ್ರ

ಬೆಂಗಳೂರು: ವಾರದೊಳಗೆ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಿ, ಪ್ರಕ್ರಿಯೆ ಆರಂಭಿಸುವಂತೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆದೇಶಿಸಿದ ಬೆನ್ನಲ್ಲೇ, ‘ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನ. 5ರಿಂದ ಆರಂಭವಾಗಲಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

‘ಈಗಾಗಲೇ ಭರವಸೆ ನೀಡಿರುವಂತೆ ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆ ಶಿಕ್ಷೆಗೆ ಒಳಗಾದ ಶಿಕ್ಷಕರಿಗೆ ಮೊದಲು ಆದ್ಯತೆ ಸಿಗಲಿದೆ’ ಎಂದೂ ಅವರು ಹೇಳಿದ್ದಾರೆ.

‘ವರ್ಗಾವಣೆ ಪ್ರಕ್ರಿಯೆ ಆರಂಭಿಸುವ ಕುರಿತು ಅಧಿಸೂಚನೆ ಹಾಗೂ ವೇಳಾಪಟ್ಟಿಯನ್ನು ತಕ್ಷಣ ಹೊರಡಿಸಲು ಸಾರ್ವಜನಿಕ‌ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆ. ಗುರುವಾರ (ಅ.22) ವೇಳಾಪಟ್ಟಿ ಪ್ರಕಟಗೊಳ್ಳಲಿದೆ’ ಎಂದೂ ಅವರು‌ ಹೇಳಿದ್ದಾರೆ.

ಶಿಕ್ಷಕರು ಮತ್ತು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ತಕ್ಷಣ ಆರಂಭಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT