ಗುರುವಾರ , ಜೂನ್ 24, 2021
28 °C

ಕೋವಿಡ್‌ನಿಂದ ಶಿಕ್ಷಕರು, ಉಪನ್ಯಾಸಕರ ಸಾವು: ತಕ್ಷಣ ವರದಿ ನೀಡಲು ಸಚಿವರ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ಕಾರ್ಯದಲ್ಲಿ‌ ತೊಡಗಿದ್ದ ಹಾಗೂ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಹಲವು ಶಿಕ್ಷಕರು ಹಾಗೂ ಪದವಿಪೂರ್ವ ಉಪನ್ಯಾಸಕರು ಸೋಂಕು ತಗಲಿ ಸಾವನ್ನಪ್ಪಿರುವ ಕುರಿತಂತೆ ತಕ್ಷಣ ವರದಿ ನೀಡುವಂತೆ ಇಲಾಖೆಯ ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ನಿರ್ದೇಶನ ನೀಡಿದ್ದಾರೆ.

ಕೋವಿಡ್ ಕಾರಣದಿಂದ‌ ಇದೇ ಏಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ಮೃತಪಟ್ಟ ಶಿಕ್ಷಕರು ಹಾಗೂ ಉಪನ್ಯಾಸಕರ‌‌ ವಯೋಮಾನ ಸಹಿತವಾಗಿ ಮೃತಪಟ್ಟ ಖಚಿತ ಕಾರಣಗಳೊಂದಿಗೆ ಶೀಘ್ರದಲ್ಲೇ ವರದಿ ಮಂಡಿಸುವಂತೆ ಸಾರ್ವಜನಿಕ ಶಿಕ್ಷಣ‌ ಇಲಾಖೆಯ ಆಯುಕ್ತರು ಮತ್ತು ಪದವಿಪೂರ್ವ ಶಿಕ್ಷಣ ನಿರ್ದೇಶಕರಿಗೆ ಅವರು ಸೂಚಿಸಿದ್ದಾರೆ.

ಕೋವಿಡ್ ಕಾರ್ಯದಲ್ಲಿ‌ ನಿರತರಾಗಿದ್ದಾಗ ಮತ್ತು ಉಪ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಸೋಂಕು ತಗಲಿ ಮೃತಪಟ್ಟ ಬಗ್ಗೆ ಮಾಧ್ಯಮಗಳ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವರು, ‘ಇದು ದುರದೃಷ್ಟಕರ ಸಂಗತಿ’ ಎಂದು ಖೇದ ವ್ಯಕ್ತಪಡಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು