ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ನೇಮಕಾತಿ: ವಿವಾಹಿತ ಮಹಿಳಾ ಅಭ್ಯರ್ಥಿಗಳಿಗೂ ಅವಕಾಶ

ಪೋಷಕರ ಆದಾಯಪತ್ರ ಸಲ್ಲಿಸಿದ್ದ ವಿವಾಹಿತ ಮಹಿಳಾ ಅಭ್ಯರ್ಥಿಗಳಿಗೂ ಅವಕಾಶ
Last Updated 31 ಡಿಸೆಂಬರ್ 2022, 21:19 IST
ಅಕ್ಷರ ಗಾತ್ರ

ಬೆಂಗಳೂರು: ಪೋಷಕರ ಆದಾಯ ಪ್ರಮಾಣಪತ್ರ ಸಲ್ಲಿಸಿದ್ದ ವಿವಾಹಿತ ಮಹಿಳಾ ಅಭ್ಯರ್ಥಿಗಳನ್ನೂ ಪರಿಗಣಿಸಿ, ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ (6‌ರಿಂದ 8ನೇ ತರಗತಿ) ಅಂತಿಮ ಆಯ್ಕೆ ಪಟ್ಟಿಯನ್ನು ತ್ವರಿತವಾಗಿ ಪ್ರಕಟಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ.

2022ರ ಮಾರ್ಚ್‌ನಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. 68,849 ಅಭ್ಯರ್ಥಿಗಳು ಸಿಇಟಿ ಬರೆದಿದ್ದರು. ಈಚೆಗೆ 13,363 ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು.

ತಂದೆಯ ಆದಾಯ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂಬ ಕಾರಣಕ್ಕೆ ವಿವಾಹಿತ ಮಹಿಳಾ ಅಭ್ಯರ್ಥಿಗಳನ್ನು ತಾತ್ಕಾಲಿಕ ಆಯ್ಕೆಪಟ್ಟಿಯಿಂದ ಕೈಬಿಡಲಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿ 300ಕ್ಕೂ ಹೆಚ್ಚು ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. ತಾತ್ಕಾಲಿಕ ಆದೇಶ ನೀಡಿದ್ದ ಕೋರ್ಟ್‌, ಅಂತಿಮ ತೀರ್ಪಿಗೆ ಒಳಪಡುವ ಷರತ್ತಿನ ಮೇಲೆ ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸುವಂತೆ ಸೂಚಿಸಿದೆ. ಈ ಕುರಿತು ‘ಪ್ರಜಾವಾಣಿ’ ನವೆಂಬರ್‌ 22ರ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು.

‘ಸರ್ಕಾರದ ಪರವಾಗಿ ಅಂತಿಮ ತೀರ್ಪು ಬರುವ ವಿಶ್ವಾಸವಿದೆ. ಕೆಲವು ಅಭ್ಯರ್ಥಿಗಳು ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇರುತ್ತದೆ. ಹೀಗಾಗಿ, ಆಯ್ಕೆಯಾದ ಪ್ರತಿ ಅಭ್ಯರ್ಥಿಗಳಿಂದಲೂ ಅಂತಿಮ ತೀರ್ಪಿನ ಬದ್ಧತೆಯ ಷರತ್ತಿಗೆ ಸಹಿ ಹಾಕಿಸಿಕೊಂಡು ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲು ನಿರ್ಧರಿಸಲಾಗಿದೆ’ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT