ಮಂಗಳವಾರ, ಅಕ್ಟೋಬರ್ 27, 2020
18 °C

‘ನೇಮಕಾತಿ ಊರ್ಜಿತ ಅವಧಿ ಮುಂದುವರಿಕೆ’, ಪಿಯು ಉಪನ್ಯಾಸಕರ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ನೇಮಕಾತಿ ಊರ್ಜಿತ ಅವಧಿಯನ್ನು ಕಾಲೇಜಿಗೆ ವರದಿ ಮಾಡಿಕೊಳ್ಳುವವರೆಗೆ ಮುಂದುವರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.

ಈ ಹಿಂದೆ ನೇಮಕಾತಿ ಊರ್ಜಿತದ ಅವಧಿ ಒಂದು ವರ್ಷದವರೆಗೆ ಮಾತ್ರ ಇತ್ತು. ಕೋವಿಡ್‌ ಕಾರಣದಿಂದ ಕಾಲೇಜುಗಳು ಆರಂಭವಾಗಿಲ್ಲ. ನೇಮಕಗೊಂಡವರಿಗೆ ಅನುಕೂಲ ಮಾಡಿಕೊಡಲು ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಉಪನ್ಯಾಸಕರು ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಮತ್ತು ಕೌನ್ಸಲಿಂಗ್ ನಡೆದು ಸ್ಥಳಗಳನ್ನು ನಿಗದಿಪಡಿಸಲಾಗಿದೆ. ಆದರೆ ಕೋವಿಡ್-19 ತಂದಿತ್ತ ಪರಿಸ್ಥಿತಿಯಿಂದಾಗಿ ಇನ್ನೂ ಕಾಲೇಜುಗಳು ಆರಂಭವಾಗದೆ ಇರುವುದರಿಂದ ಬೋಧಕರಿಗೆ ವರದಿ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಇದರಿಂದ ಆತಂಕಗೊಂಡ ಉಪನ್ಯಾಸಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದೆ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು