ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಆಯ್ಕೆಪಟ್ಟಿ ರದ್ದು: ಕಾನೂನು ಇಲಾಖೆಗೆ ಮೊರೆ

Last Updated 31 ಜನವರಿ 2023, 19:05 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪದವೀಧರ ಶಿಕ್ಷಕರನ್ನು ನೇಮಕ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರದ್ದುಪಡಿಸಿರುವ ಹೈಕೋರ್ಟ್‌ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಾನೂನು ಇಲಾಖೆಯ ಸಲಹೆ ಕೋರಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಪತಿಯ ಆದಾಯ ಹಾಗೂ ಜಾತಿ ಪ್ರಮಾಣಪತ್ರ ಪರಿಗಣಿಸಿ ಶಿಕ್ಷಕರ ಆಯ್ಕೆ ಪ್ರಕ್ರಿಯೆ ನಡೆಸಿದ್ದ ಶಿಕ್ಷಣ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಅಕ್ಷತಾ ಚೌಗಲಾ ಸೇರಿದಂತೆ 90 ಕ್ಕೂ ಹೆಚ್ಚು ಮಹಿಳಾ ಅಭ್ಯರ್ಥಿಗಳು ರಿಟ್‌ ಅರ್ಜಿಗಳನ್ನು ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿಗಳನ್ನು ಮಾನ್ಯ ಮಾಡಿ, ಪತಿಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರದ ಬದಲು ಅಭ್ಯರ್ಥಿಗಳ ತಂದೆಯ ಆದಾಯ ಮತ್ತು ಜಾತಿ ಪ್ರಮಾಣಪತ್ರಗಳನ್ನೂ ಪರಿಗಣಿಸಿ ಹೊಸ
ದಾಗಿ ಪಟ್ಟಿ ಸಿದ್ಧಪಡಿಸಲು ಆದೇಶಿಸಿತ್ತು.

‘ನ್ಯಾಯಾಲಯಕ್ಕೆ ಮನವರಿಕೆ ಮಾಡುವಲ್ಲಿ ವಿಫಲರಾಗಿದ್ದೇವೆ. ಈ ಕುರಿತು ಸಲಹೆ ಬಂದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. 2022ರ ಮಾರ್ಚ್‌ನಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿ, ನವೆಂಬರ್‌ನಲ್ಲಿ 13,363 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT