ಶುಕ್ರವಾರ, ಜೂನ್ 18, 2021
27 °C

ಶಿಕ್ಷಕರ ವರ್ಗಾವಣೆ: ಸಂಪುಟ ಸಭೆಗೆ ‘ಸುಗ್ರೀವಾಜ್ಞೆ’ ಪ್ರಸ್ತಾವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ–2020’ ತಿದ್ದುಪಡಿ ತಂದು, 2019–20ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದ ಶಿಕ್ಷಕರಿಗೆ ಮೊದಲು ಕೌನ್ಸೆಲಿಂಗ್‌ ನಡೆಸಿ ವರ್ಗಾವಣೆಯಲ್ಲಿ ಆದ್ಯತೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸೋಮವಾರ ನಡೆಯಲಿರುವ (ಏ. 26) ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವ ಮಂಡನೆಯಾಗಲಿದೆ. ಸುಗ್ರೀವಾಜ್ಞೆಗೆ ಸಂಪುಟ ಸಭೆಯ ಅನುಮೋದನೆ ಬಳಿಕ, ರಾಜ್ಯಪಾಲರ ಅಂಕಿತ ಪಡೆದು ತಕ್ಷಣದಿಂದಲೇ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

2020–21ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ಸಂದರ್ಭದಲ್ಲಿ 2019–20ರ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ ‘ಶಿಕ್ಷೆ’ಗೆ ಒಳಗಾದ ಶಿಕ್ಷಕರಿಗೆ ವಿಶೇಷ ಆದ್ಯತೆ ನೀಡುವ ಪ್ರಸ್ತಾವ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ–2020’ಯಲ್ಲಿ ಆಗಿರಲಿಲ್ಲ. ಆದರೆ, ಕಳೆದ ನ. 11ರಂದು ಹೊರಡಿಸಿರುವ ವರ್ಗಾವಣೆ ಅಧಿಸೂಚನೆಯಲ್ಲಿ ರಾಜ್ಯ ಸರ್ಕಾರ ಈ ಅವಕಾಶ ಕಲ್ಪಿಸಿತ್ತು. ಆದರೆ ಅದಕ್ಕೆ ಕೆಎಟಿ ಮತ್ತು ಹೈಕೋರ್ಟ್‌ ತಡೆ ನೀಡಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು